ಬುಧವಾರ, ನವೆಂಬರ್ 13, 2019
23 °C

ಐಎಂಎ ಅಧ್ಯಕ್ಷರಾಗಿ ಡಾ.ಅಣ್ಣಯ್ಯ ಕುಲಾಲ್

Published:
Updated:
Prajavani

ಮಂಗಳೂರು: ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ನೂತನ ಅಧ್ಯಕ್ಷರಾಗಿ ಡಾ.ಎಂ.ಅಣ್ಣಯ್ಯ ಕುಲಾಲ್ ಆಯ್ಕೆಯಾಗಿದ್ದಾರೆ.

ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ವೈದ್ಯಾಧಿಕಾರಿಯಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ನಗರದಲ್ಲಿ ಕುಟುಂಬ ವೈದ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಗೌರವ ಕಾರ್ಯದರ್ಶಿಯಾಗಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ. ರಶ್ಮಿ ಕುಂದಾಪುರ, ಖಜಾಂಚಿಯಾಗಿ ಕುಟುಂಬ ವೈದ್ಯ ಡಾ.ಜಿ.ಕೆ.ಭಟ್ ಸಂಕಬಿತ್ತಿಲು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀನಿವಾಸ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸತ್ಯಮೂರ್ತಿ ಐತಾಳ ಮತ್ತು ನಗರ ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯ ವಿಜ್ಞಾನ ಪ್ರಾಧ್ಯಾಪಕ ಡಾ.ಡಿ.ವೇಣುಗೋಪಾಲ್, ಜತೆ ಕಾರ್ಯದರ್ಶಿಯಾಗಿ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿಧಿವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಶ್ಯಾಮಕಿಶೋರ್ ಆಯ್ಕೆಯಾಗಿದ್ದಾರೆ.

30 ಹಿರಿಯ ವೈದ್ಯರನ್ನು ರಾಜ್ಯ ಸಮಿತಿ ಮತ್ತು 30 ಹಿರಿಯ ವೈದ್ಯರನ್ನು ಕೇಂದ್ರ ಸಮಿತಿಗೆ ಆಯ್ಕೆ ಮಾಡಲಾಯಿತು. 2019-20ರ ಸಾಲಿನ ಮಾರ್ಗದರ್ಶಕರಾಗಿ ನರರೋಗ ತಜ್ಞ ಡಾ.ಕೆ.ವಿ. ದೇವಾಡಿಗ ಅವರನ್ನು ಆರಿಸಲಾಯಿತು.

ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಇದೇ 31ರಂದು ನಡೆಯಲಿದ್ದು, ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಭಾಗವಹಿಸುವರು. ರಾಜ್ಯ ಐಎಂಎ ಅಧ್ಯಕ್ಷ ಡಾ.ಮಧುಸೂದನ್ ಅಧ್ಯಕ್ಷತೆ ವಹಿಸುವರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟು ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಅತಿಥಿಗಳಾಗಿ ಭಾಗವಹಿಸುವರು ಎಂದು ಐಎಂಎ ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)