ಬೆಳ್ತಂಗಡಿ: ‘ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೇತೃತ್ವದಲ್ಲಿ ಸುಮಾರು ₹ 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ, ಸಭಾಭವನದ ಲೋಕಾರ್ಪಣಾ ಏ.20ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ’ ಎಂದು ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಎಚ್. ಪದ್ಮ ಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವರ ಮಾತನಾಡಿದ ಅವರು, ‘ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತಿ ಸ್ವಾಮೀಜಿ ಕಟ್ಟಡ ಲೋಕಾರ್ಪಣೆಗೊಳಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸುವರು. ಅತಿಥಿಗಳಾಗಿ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸುಪ್ರೀಂಕೋರ್ಟ್ ಹಿರಿಯ ವಕೀಲ ಶೇಖರ ಜಿ.ದೇವಸ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಎಸ್.ಎಲ್.ಭೋಜೇಗೌಡ, ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಜಾನಪದ ವಿದ್ವಾಂಸ ಪ್ರೊ.ಕೆ.ಚಿನ್ನಪ್ಪ ಗೌಡ, ಪ್ರಮುಖರಾದ ಸಂಜೀವ ಮಠಂದೂರು, ಕೆ.ಹರೀಶ್ ಕುಮಾರ್, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲೋಕಯ್ಯ ಗೌಡ, ತಾಲ್ಲೂಕು ಸಂಘದ ಗೌರವಾಧ್ಯಕ್ಷ ಎಚ್.ಪದ್ಮಗೌಡ, ಬೆಂಗಳೂರಿನ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ, ಧರ್ಮದರ್ಶಿ ನಾರಾಯಣ ಬೇಗೂರು, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಲಿದ್ದಾರೆ ಎಂದರು.

ಶೃಂಗೇರಿ ಗುರುಪೀಠ: ದಕ್ಷಿಣ ಕನ್ನಡ ಜಿಲ್ಲೆಯ ಗೌಡ ಸಮಾಜದವರಿಗೆ ಶೃಂಗೇರಿ ಶಾರದಾ ಪೀಠ ಗುರುಪೀಠವಾಗಿದ್ದು, ಶೃಂಗೇರಿಯ ಗುರುಗಳು ಕುಲಗುರುಗಳಾಗಿದ್ದಾರೆ. ಆದಿಚುಂಚನಗಿರಿ ನಮ್ಮ ಸಮುದಾಯದ ಮಠವಾಗಿದೆ. ಸಮಾಜದ ಗುರುಗಳಾಗಿ ಆದಿಚುಂಚನಗಿರಿ ಸ್ವಾಮೀಜಿಯವರನ್ನು ಸ್ವೀಕರಿಸಿದ್ದೇವೆ. ನಮಗೆ ಶೃಂಗೇರಿ ಮತ್ತು ಆದಿಚುಂಚನಗಿರಿ ಎರಡೂ ಮಠಗಳ ಮೇಲೂ ಗೌರವ, ಪ್ರೀತಿ, ಅಭಿಮಾನ ಇದೆ. ಆದರೆ, ಈಚೆಗೆ ಬೆಳ್ತಂಗಡಿ ತಾಲ್ಲೂಕು ಒಕ್ಕಲಿಗರ, ಗೌಡರ ಸೇವಾ ಟ್ರಸ್ಟ್ನವರು ಗೊಂದಲದ ಹೇಳಿಕೆ ನೀಡುವ ಮೂಲಕ ಶೃಂಗೇರಿ ಮಠಕ್ಕೆ ಮತ್ತು ಆದಿಚುಂಚನಗಿರಿ ಮಠಕ್ಕೆ ಅವಮಾನ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದರು.

‘ಆದಿಚುಂಚನಗಿರಿ ಸ್ವಾಮೀಜಿಯನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂದ ಮಾತ್ರಕ್ಕೆ ಅವಮಾನ ಹೇಗಾಗುತ್ತದೆ. ನಮ್ಮ ಸಂಘಕ್ಕೂ, ಸೇವಾ ಟ್ರಸ್ಟ್ಗೆ ಯಾವುದೇ ಸಂಬಂಧ ಇಲ್ಲ. ಅವರ ಯಾವುದೇ ಕೊಡುಗೆ ನಮ್ಮ ಸಂಘಕ್ಕೆ ಇಲ್ಲ. ಈ ಕಟ್ಟಡ, ಸಭಾಭವನದ ಉದ್ಘಾಟನೆಯಲ್ಲಿ ಅವರಿಗೆ ಪ್ರಶ್ನಿಸಲು ಯಾವುದೇ ನೈತಿಕತೆ ಇಲ್ಲ. ಸಂಘಟನೆಗಳು ಇರುವುದು ಸಾಮಾರಸ್ಯಕ್ಕೆ ಹೊರತು ಸಂಘರ್ಷಕ್ಕೆ ಅಲ್ಲ’ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಕಾರ್ಯಕ್ರಮ ಸಂಯೋಜಕ ಯುವರಾಜ್ ಅನಾರು, ಉಪಾಧ್ಯಕ್ಷ ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರಾದ ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ಉಷಾದೇವಿ ಉಜಿರೆ, ವಸಂತ ನಡ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.