ಉಜಿರೆ: 50 ವರ್ಷಗಳಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ವಿಶೇಷ ಆಸಕ್ತಿ ಮತ್ತು ಕಾಳಜಿ ವಹಿಸಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಶಾಸನ, ಕಲಾಕೃತಿ, ತಾಳೆಗರಿಗ್ರಂಥ, ವಿಂಟೇಜ್ ಕಾರುಗಳನ್ನು ಸಂರಕ್ಷಿಸಿ, ಪ್ರದರ್ಶನಕ್ಕಿಟ್ಟಿರುವುದು ವಿಶೇಷ ಸಾಧನೆಯಾಗಿದೆ. ಏಕವ್ಯಕ್ತಿಯ ಈ ಸಾಧನೆ ಗಮನಿಸಿ ಹೆಗ್ಗಡೆ ಅವರಿಗೆ ಇಂಡಿಯ ಬುಕ್ ಆಫ್ ರೆಕಾರ್ಡ್ಸ್ ಮಾನ್ಯತೆ ನೀಡಲಾಗಿದೆ ಎಂದು ನವದೆಹಲಿಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮುಖ್ಯಸ್ಥ ಪ್ರದೀಪ್ ಭಾರದ್ವಾಜ್ ಹೇಳಿದರು.

ಧರ್ಮಸ್ಥಳದ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಸಂಗ್ರಹ ವಿಭಾಗವನ್ನು ಶನಿವಾರ ಉದ್ಘಾಟಿಸಿ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಮಂಜೂಷಾ’ದಲ್ಲಿ 7,500 ತಾಳೆಗರಿ ಹಸ್ತಪ್ರತಿಗಳು, 21 ಸಾವಿರ ಕಲಾತ್ಮಕ ವಸ್ತುಗಳು, 25 ಸಾವಿರ ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹ ಇದೆ. ಇಂಥ ಅಪೂರ್ವ ಸಂಗ್ರಹವನ್ನು ಒಬ್ಬರೇ ವ್ಯಕ್ತಿ ಮಾಡಿರುವುದು ವಿಶಿಷ್ಟ ದಾಖಲೆಯಾಗಿದೆ. ಇದನ್ನು ಜಾಗತಿಕ ಮಟ್ಟದ ಗಿನ್ನೆಸ್ ದಾಖಲೆಗೂ ಸೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ದಂತಶಿಲ್ಪಕಲೆ ಮತ್ತು ಕಲಾಕೃತಿಗಳ ಸಂಗ್ರಹದಲ್ಲಿ ದಂತದ ಕೆತ್ತನೆಯಲ್ಲಿ ರೂಪಿಸಿದ ಶಿವಸಹಸ್ರ ನಾಮ, ಎರಡು ಅಡಿ ಉದ್ದದ ದಂತದ ಮೂರ್ತಿಗಳು, ಆನೆಯ ಕೆತ್ತನೆ ನೂರು ದಂತದ ಆನೆಗಳ ಸಮೂಹ, ಆನೆಯ ದಂತದ ಮೇಲೆ ಕೆತ್ತನೆ ಮಾಡಿದ ವಿಷ್ಣುಪುರಾಣದ ಚಿತ್ರಕಥೆ ಸಂಗ್ರಹದಲ್ಲಿದೆ.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಅಪೂರ್ವ ಸಂಗ್ರಹದಲ್ಲಿರುವ ಆಕರ್ಷಕ ವಸ್ತುಗಳ ದಾಖಲೀಕರಣದ ನಡೆಯುತ್ತಿದೆ. ಪುದುಚೇರಿ, ತಮಿಳುನಾಡು ಮೊದಲಾದ ಕಡೆಗಳಲ್ಲಿ ದಂತದ ಬಾಚಣಿಗೆ, ದಂತದ ಟೂತ್ ಬ್ರಶ್ಗಳನ್ನು ಬಳಸುತ್ತಿದ್ದು, ಅಂಥ ವಿಶಿಷ್ಟ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಮಂಜೂಷಾದ ಕ್ಯುರೇಟರ್ ಪುಷ್ಪದಂತ, ರಿತೇಶ್ಶರ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.