ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆ.19ರಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ: ಉಮಾನಾಥ ಶೆಟ್ಟಿ

Published : 17 ಆಗಸ್ಟ್ 2024, 14:03 IST
Last Updated : 17 ಆಗಸ್ಟ್ 2024, 14:03 IST
ಫಾಲೋ ಮಾಡಿ
Comments

ಪುತ್ತೂರು: ಆ.19ರಂದು ಪುತ್ತೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ನಡೆಯಲಿದೆ ಎಂದು ಪುತ್ತೂರು ತಾಲ್ಲೂಕು ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ತಿಳಿಸಿದರು.

ಪುತ್ತೂರು ತಾಲ್ಲೂಕು ಪಂಚಾಯಿತಿ ತರಬೇತಿ ಸಭಾಂಗಣದಲ್ಲಿ ಶನಿವಾರ ಕಚೇರಿ ಉದ್ಘಾಟನೆಯ ಪೂರ್ವಭಾವಿಯಾಗಿ ನಡೆದ ಗ್ಯಾರಂಟಿ ಯೋಜನೆಯ ಇಲಾಖಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಚೇರಿಯನ್ನು ಶಾಸಕ ಅಶೋಕ್‌ಕುಮಾರ್‌ ರೈ ಉದ್ಘಾಟಿಸುವರು. ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಸೇರಿದಂತೆ ಮುಖಂಡರು ಭಾಗವಹಿಸುವರು. ಪುತ್ತೂರು ತಾಲ್ಲೂಕು ವ್ಯಾಪ್ತಿಯಲ್ಲಿ ಯೋಜನೆಗಳನ್ನು ಪಡೆದುಕೊಂಡವರ, ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಬಾಕಿ ಉಳಿದವರು ಮತ್ತು ಈ ಯೋಜನೆಗಳಿಗೆ ಸರ್ಕಾರ ಬಳಕೆ ಮಾಡಿದ ಹಣದ ವಿವರಗಳನ್ನು ಸ್ಪಷ್ಟವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಮಿತಿ ಸದಸ್ಯರ ಘೋಷಣೆ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಾರ್ಯದರ್ಶಿಯಾಗಿರುವ ನವೀನ್‌ಕುಮಾರ್‌ ಭಂಡಾರಿ ಮಾತನಾಡಿ, ಈ ಸಮಿತಿಯಲ್ಲಿ ಅಧ್ಯಕ್ಷರನ್ನು ಹೊರತು ಪಡಿಸಿ 14 ಮಂದಿ ಸದಸ್ಯರ ನೇಮಕವಾಗಿದೆ. ಶಿವನಾಥ ರೈ ಸರ್ವೆ, ಸಂತೋಷ್ ಭಂಡಾರಿ ಸಿ.ಎಚ್.ಒಳಮೊಗ್ರು, ಸೇಸಪ್ಪ ನೆಕ್ಕಿಲು ಹಿರೇಬಂಡಾಡಿ, ತಾರಾನಾಥ ನುಳಿಯಾಲು ನಿಡ್ಪಳ್ಳಿ, ಮಹಮ್ಮದ್ ಫಾರೂಕ್ ಪೆರ್ನೆ, ಬಬಿತಾ ಅಳಿಕೆ, ವಿಜಯಲಕ್ಷ್ಮಿ ಕೋಡಿಂಬಾಡಿ, ಎಡ್ವರ್ಡ್‌ ಮೈಕಲ್ ಡಿಸೋಜ ಅಮ್ಚಿನಡ್ಕ, ಅಶೋಕ್ ಪೂಜಾರಿ ಬೊಳ್ಳಾಡಿ, ಹುಸೈನ್ ವಿಟ್ಲ, ಧೀರಜ್ ಗೌಡ ಕೊಡಿಪ್ಪಾಡಿ, ವಿಶ್ವಜಿತ್ ಅಮ್ಮುಂಜೆ ಕುರಿಯ, ಶೀನಪ್ಪ ಪೂಜಾರಿ ಪಡ್ನೂರು, ಆಸ್ಮಾ ಉಮರ್ ಕೆದಂಬಾಡಿ ಸದಸ್ಯರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಮಿತಿ ಸಭೆ ತಿಂಗಳಲ್ಲಿ ಎರಡು ಬಾರಿ ನಡೆಯಲಿದ್ದು, ಗ್ಯಾರಂಟಿ ಯೋಜನೆಯಲ್ಲಿ ಉಂಟಾಗಬಹುದಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆ ಜಿಲ್ಲಾ ಸಮಿತಿಯ ಪೂರ್ಣೇಶ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT