ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ಧ್ವಜ ಸಂಹಿತೆ ಪಾಲಿಸಿ: ಪಾಲಿಕೆ ಸೂಚನೆ

Published 14 ಆಗಸ್ಟ್ 2024, 4:58 IST
Last Updated 14 ಆಗಸ್ಟ್ 2024, 4:58 IST
ಅಕ್ಷರ ಗಾತ್ರ

ಮಂಗಳೂರು: ಇದೇ 15ರಂದು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಉದ್ಯಮಗಳು, ಸಂಘ ಸಂಸ್ಥೆಗಳು, ನಾಗರಿಕ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ರಾಷ್ಟ್ರ ಧ್ವಜವನ್ನು ಹಾರಿಸುವಾಗ ಭಾರತೀಯ ಧ್ವಜ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾಲಿಕೆ ಸೂಚಿಸಿದೆ.

‘ಭಾರತೀಯ ಧ್ವಜ ಸಂಹಿತೆಯ ಪ್ರಕಾರ  ಬಟ್ಟೆಯಿಂದ ಮಾಡಿದ ರಾಷ್ಟ್ರ ಧ್ವಜಗಳನ್ನು ಮಾತ್ರ ಬಳಸಬೇಕು. ರಾಷ್ಟ್ರ ಧ್ವಜಕ್ಕೆ ಅಪಮಾನ ಹಾಗೂ ಅಗೌರವ ತೋರದಂತೆ ಧ್ವಜಾರೋಹಣ ನಡೆಸಬೇಕು. ಸೂರ್ಯೋದಯದ ಬಳಿಕವೇ ಧ್ವಜವನ್ನು ಅರಳಿಸಬೇಕು.ಸೂರ್ಯಾಸ್ತದ ಸಂದರ್ಭದಲ್ಲಿ ಧ್ವಜವನ್ನು ಧ್ವಜಸ್ತಂಭದಿಂದ ಇಳಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ ಹೊತ್ತು ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಾಡಬಾರದು.’

‘ರಾಜ್ಯದಲ್ಲಿ ಪ್ಲಾಸ್ಟಿಕ್‌ ಬಾವುಟಗಳ ಉತ್ಪಾದನೆ, ಮಾರಾಟವನ್ನು ನಿಷೇಧಿಸಲಾಗಿದೆ. ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಾರದು. ಖಾದಿ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜದ ಬಳಸಲು ಆದ್ಯತೆ ನೀಡಬೇಕು’ ಎಂದು ಕೋರಿದೆ.

‘ಭಾರತೀಯ ಧ್ವಜ ಸಂಹಿತೆಯ ಉಲ್ಲಂಘನೆ ಶಿಕ್ಷಾರ್ಹ ಅಪರಾಧ’ ಎಂದು ಪಾಲಿಕೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT