ಭಾನುವಾರ, ಸೆಪ್ಟೆಂಬರ್ 19, 2021
23 °C
ಮಾತೆಯ ಧ್ವಜ ವಂದನೆಗೆ ಭಾರಿ ಮೆಚ್ಚುಗೆ

ಅರಿವಿನಾಚೆ ಅರಳಿದ ದೇಶಭಕ್ತಿ: ಕೂಲಿ ಕಾರ್ಮಿಕ ಮಹಿಳೆಯ ಧ್ವಜ ವಂದನೆಗೆ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ಭಾನುವಾರ ಬೆಳಿಗ್ಗೆ ಬಾನೆತ್ತರಕ್ಕೆ ಹಾರಾಡುತ್ತಿದ್ದ ಧ್ವಜವನ್ನು ಕಂಡ ಕೂಲಿ ಕೆಲಸಕ್ಕೆ ಹೊರಟಿದ್ದ ಮಹಿಳೆಯೊಬ್ಬರು, ಚಪ್ಪಲಿ ಕಳಚಿ, ಧ್ವಜಕ್ಕೆ ಸೆಲ್ಯೂಟ್ ಹೊಡೆದು, ಮುಂದೆ ಸಾಗಿದರು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಲ್ಲಿ ಹೊರಟಿದ್ದ ಕೂಲಿ ಕಾರ್ಮಿಕ ಮಹಿಳೆ ಧ್ವಜವನ್ನು ಕಂಡವರೇ, ಕೈಯಲ್ಲಿ ಹಿಡಿದ ಪರಿಕರಗಳನ್ನು ಬಗಲಿಗಿಟ್ಟು, ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಅಲ್ಲೇ ಸಮೀಪದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ಚಿತ್ರವನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರ ಧ್ವಜಕ್ಕೆ ಸೆಲ್ಯೂಟ್ ಮಾಡಿ ತನ್ನ ಪಾಡಿಗೆ ಕೆಲಸಕ್ಕೆ ಹೋದರಂತೆ. ಇದು ಭಾರತ ಸಂಭ್ರಮ, ಶ್ರದ್ಧೆ, ದೇಶಭಕ್ತಿ’ ಎಂದು ಅವರು ಬಣ್ಣಿಸಿದ್ದಾರೆ.

ಈ ಚಿತ್ರವನ್ನು ಕಂಡು ‘ಇದು ಭಾರತ’ ಎಂದು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬಲಡ್ಕ ವ್ಯಾಖ್ಯಾನಿಸಿದ್ದನ್ನು ಚಿಂತಕ ಅರವಿಂದ ಚೊಕ್ಕಾಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು