ಮಂಗಳೂರು: ಕುವೈತ್‌ನ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ (ಐಸಿಎಸ್ ಜಿ)ನಿಂದ ಭಾರತಕ್ಕೆ 147 ಟನ್ ದ್ರವೀಕೃತ ಆಮ್ಲಜನಕ, ಇತರ ವೈದ್ಯಕೀಯ ಸಾಮಗ್ರಿಗಳನ್ನು ನೀಡಲಾಗಿದೆ. ಈ ಸಾಮಗ್ರಿಗಳನ್ನು ಹೊತ್ತ ನೌಕಾಪಡೆಯ ಹಡಗು ಐಎನ್‌ಎಸ್ ಶಾರ್ದೂಲ್ ಮಂಗಳವಾರ ಬೆಳಿಗ್ಗೆ ಇಲ್ಲಿನ ಎನ್‌ಎಂಪಿಟಿಗೆ ಬಂದಿದೆ.

ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ನೀಡಲಾದ ಈ ನೆರವನ್ನು ರೆಡ್ ಕ್ರಾಸ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸ್ವೀಕರಿಸಿದೆ. ದ್ರವೀಕೃತ ಆಮ್ಲಜನಕ ಹೊಂದಿದ 11 ಟ್ಯಾಂಕ್‌ಗಳು, 2 ಸೆಮಿ ಟ್ರೇಲರ್‌ಗಳು, 1,200 ಆಕ್ಸಿಜನ್ ಸಿಲಿಂಡರ್‌ಗಳಿವೆ.

ರೆಡ್ ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ರಾಜ್ಯ ನಿರ್ವಹಣಾ ಸಮಿತಿಯ ಸದಸ್ಯ ಯತೀಶ್ ಬೈಕಂಪಾಡಿ ಎನ್ಎಂಪಿಟಿಯಲ್ಲಿ ಈ ಸರಕು ಸ್ವೀಕರಿಸಿದರು.

ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ಮಹೇಶ್ ಕುಮಾರ್, ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.