ಸುಬ್ರಹ್ಮಣ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯದ ಯುವಕ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬುವರ ಪುತ್ರ ನಂದನ ಎಸ್.ಭಟ್ (25) ಮೃತಪಟ್ಟವರು.

ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಸರ್ಕಾರದ ನೆರವಿನಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಜಯಲಕ್ಷ್ಮಿ ಅವರ ಸಹೋದರ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರೂ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ ಅವರು ಮಾರಿಷಸ್ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.