ಸೋಮವಾರ, ಜೂನ್ 14, 2021
22 °C
ಕೋವಿಡ್‌ನಿಂದ 179 ಮಂದಿ ಗುಣಮುಖ, ಒಂಭತ್ತು ಸಾವು

ದಕ್ಷಿಣ ಕನ್ನಡ | 279 ಜನರಲ್ಲಿ ಸೋಂಕು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 279 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿದ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,301ಕ್ಕೆ ತಲುಪಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 65, ಶೀತ ಜ್ವರದಿಂದ ಬಳಲುತ್ತಿದ್ದ (ಐಎಲ್‌ಐ) 114, ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿರುವ (ಎಸ್‌ಎಆರ್‌ಐ) 18 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇತರ 82 ಜನರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಮಂಗಳೂರು ತಾಲ್ಲೂಕಿನ 163, ಬಂಟ್ವಾಳ ತಾಲ್ಲೂಕಿನ 49, ಪುತ್ತೂರು ತಾಲ್ಲೂಕಿನ 25, ಬೆಳ್ತಂಗಡಿ ತಾಲ್ಲೂಕಿನ 15, ಸುಳ್ಯ ತಾಲ್ಲೂಕಿನ 10 ಜನರು ಹಾಗೂ ಜಿಲ್ಲೆಯಲ್ಲಿ ಪರೀಕ್ಷೆಗೊಳಗಾದ ಹೊರ ಜಿಲ್ಲೆಗಳ 17 ಮಂದಿಗೆ ಕೋವಿಡ್‌ ಸೋಂಕು ತಗುಲಿರುವುದು ಮಂಗಳವಾರ ಖಚಿತಪಟ್ಟಿದೆ.

138 ಜನರು ಆಸ್ಪತ್ರೆಗೆ: 279 ಜನರ ಪೈಕಿ 100 ಪುರುಷರು ಮತ್ತು 38 ಮಹಿಳೆಯರಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡುಬಂದಿವೆ. ಅವರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಆರಂಭಿಸಲಾಗಿದೆ.

88 ಪುರುಷರು ಮತ್ತು 53 ಮಹಿಳೆಯರು ಸೇರಿ 141 ಜನರಲ್ಲಿ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ಅವರನ್ನು ಕೋವಿಡ್‌ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಪ್ರತ್ಯೇಕವಾಸದಲ್ಲಿರಿಸಿ, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ ಸೋಂಕು ಪತ್ತೆಗಾಗಿ ಒಟ್ಟು 73,674 ಜನರ ಗ‌ಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಪರೀಕ್ಷಿಸಲಾಗಿದೆ. 9,301 ಜನರಲ್ಲಿ ಸೋಂಕು ದೃಢಪಟ್ಟಿದ್ದು, 64,373 ‘ನೆಗೆಟಿವ್‌’ ವರದಿಗಳು ಬಂದಿವೆ.

173 ಮಂದಿ ಗುಣಮುಖ: ಜಿಲ್ಲೆಯಲ್ಲಿ 179 ಜನರು ಕೋವಿಡ್‌ ಸೋಂಕಿನಿಂದ ಗುಣಮುಖರಾಗಿರುವುದು ಮಂಗಳ
ವಾರ ದೃಢಪಟ್ಟಿದೆ. ಈವರೆಗೆ ಒಟ್ಟು 6,827 ಮಂದಿ ಗುಣಮುಖರಾಗಿದ್ದು, 2,188 ಸಕ್ರಿಯ ಪ್ರಕರಣಗಳಿವೆ.

‘ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 56 ಜನರು ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿದ್ದ ಆರು ಮಂದಿಯನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ. ಮನೆಗಳಲ್ಲೇ ಪ್ರತ್ಯೇಕವಾಸದಲ್ಲಿದ್ದ 111 ಜನರ ಆರೋಗ್ಯದ ಮೇಲಿನ ನಿಗಾವನ್ನು ಕೈಬಿಡಲಾಗಿದೆ. 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುವಂತೆ ಎಲ್ಲರಿಗೂ ಸೂಚಿಸಲಾಗಿದೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು