ಸೋಮವಾರ, ಜೂನ್ 1, 2020
27 °C

ಇನ್ಫೋಸಿಸ್ ಪ್ರತಿಷ್ಠಾನದಿಂದ ₹28 ಲಕ್ಷ ಮೌಲ್ಯದ‌ ವೈದ್ಯಕೀಯ ಸಾಮಗ್ರಿ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇನ್ಫೋಸಿಸ್ ಪ್ರತಿ಼ಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಪೊಲೀಸ್ ಇಲಾಖೆಯ ಕೋರಿಕೆಗೆ ತಕ್ಷಣ ಸ್ಪಂದಿಸಿ, 36 ಗಂಟೆಯೊಳಗೆ ₹ ಲಕ್ಷ ಮೌಲ್ಯದ ತುರ್ತು ವೈದ್ಯಕೀಯ‌ ಸಾಮಗ್ರಿಗಳನ್ನು ಕಳುಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರು, ಡಾ.ಸುಧಾ ಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ವೈದ್ಯಕೀಯ ಸಾಮಗ್ರಿಗಳ ನೆರವಿಗಾಗಿ ದ.ಕ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸ್ ಇಲಾಖೆ ಇನ್ಫೋಸಿಸ್ ಫೌಂಡೇಶನ್‌ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಬಳಿ ನೆರವು ನೀಡುವಂತೆ ವಿನಂತಿಸಿಕೊಂಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು