ಬುಧವಾರ, ಸೆಪ್ಟೆಂಬರ್ 22, 2021
23 °C

ಯೋಗ ಮಾಡುವಾಗ ಜಾರಿ ಬಿದ್ದು ಗಾಯ, ಆಸ್ಕರ್ ಫರ್ನಾಂಡಿಸ್‌ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಾಜ್ಯಸಭಾ ಸದಸ್ಯ, ಕಾಂಗ್ರೆಸ್‌ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್, ಯೋಗ ಮಾಡುವ ಸಂದರ್ಭ ಜಾರಿ ಬಿದ್ದು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ ಯೋಗ ಮಾಡುವ ವೇಳೆ ಆಸ್ಕರ್ ಫರ್ನಾಂಡಿಸ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದಾರೆ. ಆದರೆ ಆಗ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ನಿರ್ಲಕ್ಷಿಸಿದ್ದರು. ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಅವರು ಯೇನೆಪೋಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದ್ದರು. ಆಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಆರೋಗ್ಯದಲ್ಲೂ ಏರುಪೇರು ಉಂಟಾಗಿದೆ.

ಆಸ್ಕರ್ ಫರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ. ಸದ್ಯಕ್ಕೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು