ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವಿನ ಹೊಡೆದಾಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದ ಸಮೀರ್ ಎಂಬಾತ ಇತರ ವಿಚಾರಣಾಧೀನ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಮೂಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.

ಬೆಳಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದ್ದು, ಸಮೀರ್ ಸ್ಟೀಲ್ ಚಮಚ ಮತ್ತಿತರ ಅಡುಗೆ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದಿರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.

ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿನಿಂದ ಬೊಬ್ಬೆ ಕೇಳಿದ್ದು, ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಲಾಠಿ ಏಟು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.