ಶುಕ್ರವಾರ, ಮೇ 20, 2022
23 °C

ಕೋವಿಡ್ ಬಾಧಿತರಿದ್ದ ಅಪಾರ್ಟ್ಮೆಂಟ್ ನಿವಾಸಿಗಳಿಗೂ ತಪಾಸಣೆ: ಪಾಲಿಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ಸಮುಚ್ಚಯ, ಅಪಾರ್ಟ್ಮೆಂಟ್ಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದರೆ ಸಮುಚ್ಚಯದ ಎಲ್ಲ ನಿವಾಸಿಗಳನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ಕೋವಿಡ್ -19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ಪಾಸಿಟಿವ್ ಪ್ರಮಾಣವನ್ನು ಕಡಿಮೆಗೊಳಿಸಲು ತೀವ್ರ ಪ್ರಯತ್ನ ನಡೆದಿದ್ದು, ಇದರ ಭಾಗವಾಗಿ ವಸತಿ ಸಮುಚ್ಚಯ, ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಶೇ 17 ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು, ಇದನ್ನು  ತಗ್ಗಿಸಲು  ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಿ,  ಸೋಕಿತರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಪ್ಲ್ಯಾಟ್ ಮಾಲೀಕರು, ನಿವಾಸಿಗಳ ಒಕ್ಕೂಟ ( ಅಸೋಸಿಯೇಷನ್ ) ಮತ್ತು ವಸತಿ ಸಮುಚ್ಚಯದ ಎಲ್ಲಾ ನಿವಾಸಿಗಳ ಸಂಪೂರ್ಣ ಸಹಕಾರವನ್ನು ಆಯುಕ್ತ  ಅಕ್ಷಯ್ ಶ್ರೀಧರ್ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು