ಬಂಟ್ವಾಳ: ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ತುಂಬೆ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ರಸ್ತೆ ಬದಿ ಮೋರಿ ಅಳವಡಿಸುವ ಕಾಮಗಾರಿ ಮಂಗಳವಾರ ಬಹುತೇಕ ಪೂರ್ಣಗೊಂಡಿದೆ.

ಸರಾಗವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಮೋರಿ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದರು.

ಪ್ರತಿ ವರ್ಷ ಮಳೆಗಾಲದಲ್ಲಿ ಈ ಹೆದ್ದಾರಿಯಲ್ಲಿ ಮಳೆ ನೀರು ಸಂಗ್ರಹಗೊಂಡು ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ಬರುವ ವಾಹನಗಳ ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದ ಬಗ್ಗೆ ದೂರು ಬಂದಿತ್ತು. ಕೆಲ ದಿನ ಚರಂಡಿ ದುರಸ್ತಿ ಕಾಮಗಾರಿ ನಡೆದು ಬಳಿಕ ಯಥಾ ಸ್ಥಿತಿ ಮುಂದುವರಿಯುತ್ತಿತ್ತು. ಈ ಹೆದ್ದಾರಿ ಪಕ್ಕದ ಗುಡ್ಡದ ನೀರು ನೇರವಾಗಿ ರಸ್ತೆಗೆ ಹರಿದು ಬರುತಿದ್ದು, ಇಲ್ಲಿನ ಬಂಡೆಗಳನ್ನು ಒಡೆದು ರಸ್ತೆ ನಿರ್ಮಿಸಿದ್ದರಿಂದ ಸೂಕ್ತ ಚರಂಡಿ ನಿರ್ಮಿಸಲು ಸಾಧ್ಯವಾಗಿರಲಿಲ್ಲ.

ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.