ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಕ್ಕದಿಂದ ಕಣ್ಣೂರಿನವರಗೆ ಮಾನವ ಸರಪಳಿ ರಚಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈಜೋಡಿಸಿದರು. ಕದ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ. ಅವರು ಸಂವಿಧಾನದ ಪೀಠಿಕೆಯನ್ನು ಓದಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಪಮೇಯರ್ ಸುನೀತಾ, ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ ಮತ್ತಿತರರು ಭಾಗವಹಿಸಿದ್ದರು.