ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ | ಅಂತರರಾಷ್ಟ್ರೀಯ ಫೆಸ್ಟಿವಲ್‌: ಅಮೋಘ ಆಯ್ಕೆ  

Published 30 ಜನವರಿ 2024, 14:29 IST
Last Updated 30 ಜನವರಿ 2024, 14:29 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿ ಅಮೋಘ ಎ.ಹೆಬ್ಬಾರ್ 2024ರ ಮಾರ್ಚ್‌ನಲ್ಲಿ ಉತ್ತರ ಆಫ್ರಿಕಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್ ‘ಐಫೆಸ್ಟ್’ನಲ್ಲಿ ‘ಕೀಟ ಮತ್ತು ಕಳೆ ನಿಯಂತ್ರಿಸಲು ನೈಸರ್ಗಿಕ ವಿಧಾನ’ ಎಂಬ ಶೀರ್ಷಿಕೆಯ ಸಂಶೋಧನಾ ಯೋಜನೆ ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾನೆ.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಜ.26ರಂದು ನಡೆದ ರಾಷ್ಟ್ರೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳದಲ್ಲಿ ಈತ ಬೆಳ್ಳಿ ಪದಕ ಗೆದ್ದುಕೊಂಡಿದ್ದಾನೆ. ಪ್ರಾದೇಶಿಕ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದ ಅಮೋಘ, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ರಾಜ್ಯಮಟ್ಟದ ರಾಷ್ಟೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್‌ನಲ್ಲಿ ಸಂಶೋಧನಾ ಯೋಜನೆ ಪ್ರದರ್ಶಿಸಿದ್ದ.

ಆಳ್ವಾಸ್ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಎಚ್.ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT