ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಒಂದು ವಾರ ಅಂತರ ರಾಜ್ಯ ಬಸ್‌ ಸಂಚಾರ ನಿರ್ಬಂಧ

Last Updated 31 ಜುಲೈ 2021, 19:31 IST
ಅಕ್ಷರ ಗಾತ್ರ

ಮಂಗಳೂರು: ಕೇರಳದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ, ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರ ಸ್ಥಗಿತಗೊಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಶನಿವಾರ ನಿರ್ಧರಿಸಿದೆ.

‘ಕೇರಳದಿಂದ ಜಿಲ್ಲೆಗೆ ಬರುವವರ ಸಂಖ್ಯೆ ಏರಿದೆ. ಲಸಿಕೆ ಪಡೆದವರು, ನೆಗೆಟಿವ್ ವರದಿ ಇರುವವರಿಗೆ ಪ್ರವೇಶಾವಕಾಶವಿದೆ. ಮತ್ತಷ್ಟು ನಿಯಮಗಳ ಜಾರಿ ಕುರಿತು ವರದಿ ಸಲ್ಲಿಸಲಿದ್ದು, ಸರ್ಕಾರದ ಸೂಚನೆ ಆಧರಿಸಿ ಮಾರ್ಗಸೂಚಿ ರೂಪಿಸಲಾಗುವುದು’ ಎಂದು ಜಿಲ್ಲಾಧಿಕಾರಿಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

‘ಧಾರ್ಮಿಕ ಕ್ಷೇತ್ರಗಳಿಗೆ ಬರುವ ಜನರ ನಿಯಂತ್ರಣ, ಅಂತರ ರಾಜ್ಯ ಬಸ್‌ಗಳ ಸಂಚಾರ, ಬೇರೆ ರಾಜ್ಯದಿಂದ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮಗಳನ್ನು ಹಾಕುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗುತ್ತಿದೆ’ ಎಂದು ಡಾ.ರಾಜೇಂದ್ರ ತಿಳಿಸಿದ್ದಾರೆ.

‘ತಲಪಾಡಿ ಮತ್ತು ಕಾಸರಗೋಡು ಜಿಲ್ಲೆಯ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಟಿಪಿಸಿಆರ್‌ ತಪಾಸಣೆ ಕೇಂದ್ರ ಆರಂಭಿಸಲಾಗಿದೆ. ನೆಗೆಟಿವ್ ವರದಿ ಇಲ್ಲದವರ ಗಂಟಲುದ್ರವ ಸಂಗ್ರಹಿಸುತ್ತಿದ್ದು, ವರದಿ ಬರುವವರೆಗೆ ಪ್ರತ್ಯೇಕವಾಗಿರಲು ಸೂಚಿಸಲಾಗುತ್ತಿದೆ’ ಎಂದು ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ತಿಳಿಸಿದ್ದಾರೆ.

ಈ ಮಧ್ಯೆ ಆಗಸ್ಟ್‌ ಮೊದಲ ವಾರದಲ್ಲಿ ಆರಂಭ ಆಗುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮತ್ತೆ ಮುಂದೂಡುವಂತೆ ಒತ್ತಾಯಗಳು ಆರಂಭವಾಗಿವೆ.

ಕೇರಳದಲ್ಲಿ ವಾರಾಂತ್ಯ ಕರ್ಫ್ಯೂ: ಕೇರಳದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದರಿಂದ ಶನಿವಾರ ಗಡಿಭಾಗದಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT