ಗುರುವಾರ , ಸೆಪ್ಟೆಂಬರ್ 16, 2021
29 °C

‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ ನೀಡುತ್ತಿದ್ದು, 2020ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ₹10ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಕನ್ನಡದಲ್ಲಿ ಪ್ರಕಟಿತ 2020ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಇದೇ 30ರ ಒಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001 (ಮೊ.ಸಂ. 9845054191, 0824– 2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು. ಎಚ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು