ಮಂಗಳೂರು: ಒಳ ಮೀಸಲಾತಿ ಸಮೀಕ್ಷೆ ಹೆಸರಿನಲ್ಲಿ ಸಂವಿಧಾನ ವಿರೋಧಿ ಕೆಲಸ ನಡೆಯುತ್ತಿದ್ದು, ಈ ಅಕ್ರಮ ಸರಿಪಡಿಸುವವರೆಗೆ ಸಮೀಕ್ಷೆ ಕಾರ್ಯ ಸ್ಥಗಿತಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ–ಸಂಸ್ಥೆಗಳ ಮಹಾಒಕ್ಕೂಟ ಒತ್ತಾಯಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ, ‘ನ್ಯಾ. ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭವಾಗಿದೆ. ಈ ಸಮೀಕ್ಷೆಯಲ್ಲಿ ದೊಡ್ಡ ಜಾತಿಯನ್ನು ಮೀಸಲಾತಿ ಒಳಗೆ ತರುವ ಷಡ್ಯಂತ್ರವಿದೆ’ ಎಂದು ಆರೋಪಿಸಿದರು.

‘ಇದನ್ನು ನಮ್ಮ ಒಕ್ಕೂಟ ವಿರೋಧಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಗಮನ ಸೆಳೆದಿದೆ. ಸರ್ಕಾರದಿಂದ ಈ ಬಗ್ಗೆ ತುರ್ತು ಕ್ರಮ ಆಗದಿದ್ದಲ್ಲಿ ಮುಂದಿನ ಹೋರಾಟ ರೂಪಿಸಲಾಗುತ್ತದೆ’ ಎಂದರು.

ಇತ್ತೀಚೆಗೆ ಯುಟ್ಯೂಬ್ ಚಾನೆಲ್ವೊಂದಕ್ಕೆ ಸಂದರ್ಶನ ನೀಡಿರುವ ನ್ಯಾ. ನಾಗಮೋಹನ್ ದಾಸ್ ಅವರು, ‘ಬೇರೆ ಧರ್ಮಕ್ಕೆ ಮತಾಂತರಗೊಂಡವರು ಆಚರಣೆಯಲ್ಲಿ ಆ ಧರ್ಮವನ್ನು ಅನುಸರಿಸುತ್ತ, ಸರ್ಕಾರಿ ದಾಖಲೆಗಳಲ್ಲಿ ಪರಿಶಿಷ್ಟ ಜಾತಿ ಎಂದು ಮುಂದುವರಿಸಿ, ಉಪಜಾತಿಯನ್ನು ಬರೆಸಿದ್ದರೆ, ಅಂತಹವರು ಸಮೀಕ್ಷೆಗೆ ಒಳಪಡಬಹುದು’ ಎಂದಿದ್ದಾರೆ. ಇದು ಸಂವಿಧಾನ ಮತ್ತು ಕಾನೂನಿನ ಉಲ್ಲಂಘನೆಯಾಗಿದೆ. ಸಂವಿಧಾನದ ವಿಧಿ 341(1) ರ ಅಡಿಯಲ್ಲಿ ರಾಷ್ಟ್ರಪತಿ ಹೊರಡಿಸಿರುವ ಸಂವಿಧಾನದ (ಪರಿಶಿಷ್ಟ ಜಾತಿಗಳು) ಆದೇಶ, (1950ರಲ್ಲಿ– ತಿದ್ದುಪಡಿಗಳು ಸೇರಿದಂತೆ) ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮ ಆಚರಿಸುವವರನ್ನು ಹೊರತುಪಡಿಸಿ ಇತರ ಯಾರನ್ನೂ ಪರಿಶಿಷ್ಟ ಜಾತಿಯವರು ಎಂದು ಪರಿಗಣಿಸಲು ಅವಕಾಶ ಇಲ್ಲ ಎಂದು ಹೇಳಿದರು.

ಸಮೀಕ್ಷೆಯ ನೋಡಲ್ ಇಲಾಖೆಯಾಗಿರುವ ಸಮಾಜ ಕಲ್ಯಾಣ ಇಲಾಖೆಯು ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಮೀಕ್ಷೆಯ ವೇಳೆ ಧರ್ಮದ ಹೆಸರು ನೋಂದಾಯಿಸಲು ಪ್ರತ್ಯೇಕ ಕಾಲಂ ಇಡಬೇಕು ಎಂದು ಆಗ್ರಹಿಸಿದರು.

ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು 1950ರಲ್ಲಿ ರಾಷ್ಟ್ರಪತಿ ಹೊರಡಿಸಿರುವ ಅಧಿಸೂಚನೆಯಲ್ಲೇ ‘ಜಾತಿಗಳು’ ಎಂದು ಪರಿಗಣಿಸಲಾಗಿದ್ದು, ನಂತರದ ಎಲ್ಲ ತಿದ್ದುಪಡಿಗಳಲ್ಲೂ ಇವನ್ನು ಜಾತಿಗಳು ಎಂದೇ ಪರಿಗಣಿಸಲಾಗಿದೆ. ಸಮೀಕ್ಷೆಯ ಕಾಲಂನಲ್ಲಿ ಕೈಬಿಟ್ಟಿರುವ ಈ ಮೂರು ಜಾತಿಗಳ ಹೆಸರನ್ನು ಅವುಗಳ ಸಂಕೇತ ಸಂಖ್ಯೆಗಳೊಂದಿಗೆ ಇತರ ಜಾತಿಗಳ ಜೊತೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ಮುಗೇರ ಸಂಘದ ಮುಖಂಡ ಸುಂದರ ಮೇರ, ಅಖಿಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷ ಪ್ರದೀಪ್ ಕಾಪಿಕಾಡ್, ದಲಿತ ಸಂಘರ್ಷ ಸಮಿತಿ ಮುಖಂಡ ಅಶೋಕ್ ಕೊಂಚಾಡಿ, ಅನಿಲ್ ಕಂಕನಾಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.