ಗುರುವಾರ , ಸೆಪ್ಟೆಂಬರ್ 19, 2019
24 °C

ಇಸ್ಲಾಂ ಅವಹೇಳನ: ಪ್ರಕರಣ ದಾಖಲು

Published:
Updated:

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂ ಮಹಿಳೆಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೊ ಪ್ರಸಾರ ಮಾಡಿರುವ ಆರೋಪದ ಮೇಲೆ ವಿಕ್ರಂ ದಾಸ್‌ ವಿಕ್ರಂ(ವಿಕ್ಕಿ) ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕ್ರಂ ದಾಸ್‌ ವಿಕ್ರಂ (ವಿಕ್ಕಿ) ಎಂಬಾತನ ಸಾಮಾಜಿಕ ಜಾಲತಾಣಗಳ ಖಾತೆಯ ಮೂಲಕ ವಿಡಿಯೊ ಹರಿಯಬಿಡಲಾಗಿದೆ. ಈತನ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಬಂಧನಕ್ಕೆ ಆಗ್ರಹ: ಪೊಲೀಸರು ತಕ್ಷಣವೇ ಆರೋಪಿಯನ್ನು ಬಂಧಿಸಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಿ, ವಿಡಿಯೊ ಹಿಂದಿನ ಷಡ್ಯಂತ್ರವನ್ನು ಬಯಲಿಗೆ ಎಳೆಯಬೇಕು ಎಂದಯ ಎಸ್‍ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಸುಹೈಲ್‌ ಖಾನ್ ಒತ್ತಾಯಿಸಿದ್ದಾರೆ.

Post Comments (+)