ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಬೋಗಿಗಳಲ್ಲಿ ಐಸೋಲೇಶನ್‌ ವಾರ್ಡ್‌

Last Updated 1 ಏಪ್ರಿಲ್ 2020, 14:53 IST
ಅಕ್ಷರ ಗಾತ್ರ

ಮಂಗಳೂರು: ಕೊರೊನಾ ವೈರಸ್‌ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲು ಬೋಗಿಗಳಲ್ಲಿ ಐಸೋಲೇಶನ್ ವಾರ್ಡ್ ತೆರೆಯುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಮಂಡಳಿ, ಕೊಂಕಣ ರೈಲ್ವೆ ಹಾಗೂ ದಕ್ಷಿಣ ರೈಲ್ವೆಗೆ ಸುತ್ತೋಲೆ ಕಳುಹಿಸಿದ್ದು, ಮಂಗಳೂರಿನಲ್ಲಿ ರೈಲ್ವೆ ಬೋಗಿಗಳಲ್ಲಿ ಐಸೋಲೇಶನ್ ವಾರ್ಡ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ.

ಮಂಗಳೂರು ರೈಲ್ವೆ ಡಿಪೋದಲ್ಲಿ 20 ಬೋಗಿಗಳನ್ನು ಗುರುತಿಸಿದ್ದು, ಕೊರೊನಾ ಸಂಬಂಧಿಸಿದಂತೆ ಬೋಗಿಗಳಲ್ಲಿ ಐಸೋಲೇಶನ್ ವಾರ್ಡ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಸೇರಿದಂತೆ ಎಲ್ಲ ವಿಭಾಗಗಳಿಗೆ ರೈಲ್ವೆ ಮಂಡಳಿ ಸುತ್ತೋಲೆ ರವಾನಿಸಿದೆ. ಪ್ಯಾರಾ ಮೆಡಿಕಲ್ ಸಿಬ್ಬಂದಿ ಹಾಗೂ ತರಬೇತಿ ಹೊಂದಿದ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ರೈಲ್ವೆ ಮುಖ್ಯ ವೈದ್ಯಾಧಿಕಾರಿ ಸೂಚನೆ ನೀಡಿದ್ದಾರೆ.

ತಮಿಳುನಾಡಿನ ಪೆರಂಬೂರಿನಲ್ಲಿ ಖಾಲಿ ಬೋಗಿ ಹಾಗೂ ಸ್ಲೀಪರ್ ಕೋಚ್‌ಗಳನ್ನು ಐಸೋಲೇಶನ್ ವಾರ್ಡ್ ಆಗಿ ಪರಿವರ್ತಿಸುವ ಕಾರ್ಯ ನಡೆಯುತ್ತಿದೆ. ಸೀಟುಗಳನ್ನು ತೆಗೆದು ಅಗತ್ಯ ಕ್ವಾರಂಟೈನ್ ಸೌಲಭ್ಯ, ಶೌಚಾಲಯ, ಸ್ನಾನಗೃಹದ ಸೌಲಭ್ಯ ಕಲ್ಪಿಸಲು ಬೋಗಿಗಳ ಮರು ವಿನ್ಯಾಸದ ಕಾರ್ಯ ನಡೆಯುತ್ತಿದೆ.

ವೈದ್ಯರು, ಶುಶ್ರೂಷಕಿಯರು, ಅರೆ ವೈದ್ಯಕೀಯ ಸಿಬ್ಬಂದಿಗೆ ಪುಟ್ಟ ಕೊಠಡಿ, ವೈದ್ಯಕೀಯ ಉಪಕರಣಗಳನ್ನು ಜೋಡಿಸುವ ವ್ಯವಸ್ಥೆಯನ್ನು ಬೋಗಿಯಲ್ಲೇ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT