ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕದ ಕೊರತೆಯಿಂದಲೇ ಸಮಸ್ಯೆ: ಐವನ್‌ ಡಿಸೋಜ

ಕೇಂದ್ರ, ರಾಜ್ಯ ಸರ್ಕಾರಕ್ಕೆ ದೂರದೃಷ್ಟಿಯ ಕೊರತೆ: ಐವನ್‌
Last Updated 27 ಏಪ್ರಿಲ್ 2021, 3:48 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೂರದೃಷ್ಟಿ ಮತ್ತು ಯೋಜನಾರಹಿತ ತೀರ್ಮಾನಗಳಿಂದ ದೇಶ ಮತ್ತು ರಾಜ್ಯದಲ್ಲಿ ಕೋವಿಡ್–19 ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಐವನ್‌ ಡಿಸೋಜ ಆರೋಪಿಸಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ನಿಂದ ಅತಿಹೆಚ್ಚಿನ ಸಂಖ್ಯೆಯ ಮಂದಿ ಬೆಂಗಳೂರಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆಲ್ಲಾ ಆಮ್ಲಜನಕ ಕಾರಣ ಎಂದು ಸರ್ಕಾರ ಒಪ್ಪಿಕೊಂಡಿದೆ. ಆದರೆ ರಾಜ್ಯದಲ್ಲಿ ಸೋಂಕಿತರಿಗೆ ಬೇಕಾದ ಆಮ್ಲಜನಕ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿಲ್ಲ ಎಂದು ದೂರಿದರು.

‘ಕೇಂದ್ರ ಸರ್ಕಾರದಿಂದ ಆಮ್ಲಜನಕ ಪಡೆಯಲು ನಮ್ಮ ಕೇಂದ್ರ ಸಚಿವರು, ಸಂಸದರು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಸ್ಮಶಾನಕ್ಕೆ ಎಷ್ಟು ಮಂದಿ ಹೋಗಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆಯೇ ಹೊರತು ಈ ರೋಗವನ್ನು ನಿಯಂತ್ರಿಸಲು ಬೇಕಾದ ವ್ಯವಸ್ಥೆ ಮಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸೋಂಕಿತರು ಆಮ್ಲಜನಕದ ಕೊರತೆ, ಹಾಸಿಗೆ ಲಭ್ಯವಾಗಿ ಇಲ್ಲದ್ದರಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದಾರೆ. ಅನೇಕರು ಬೆಂಗಳೂರಿನಿಂದ ಮಂಗಳೂರಿಗೆ ಬಂದು, ನಗರದ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಗೂ ಹಾಸಿಗಳನ್ನು ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರೋಗ್ಯ ಸಚಿವರು ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಗಳಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ 500 - 600 ಮಂದಿಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾಗುತ್ತಿದೆ. ಜಿಲ್ಲೆಗಳಲ್ಲಿ ಕೇವಲ 3,500 ಹಾಸಿಗೆಗಳು ಮಾತ್ರ ಲಭ್ಯವಾಗಿವೆ. ಇವುಗಳಲ್ಲಿ 300 ಐಸಿಯು ಹಾಸಿಗೆಗಳಾದರೆ, 274 ಆಮ್ಲಜನಕಯುಕ್ತ ಹಾಸಿಗೆಗಳು ಲಭ್ಯವಾಗಿವೆ ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ಒಬಿಸಿ ರಾಜ್ಯ ವಕ್ತಾರ ಗಣೇಶ್ ಪೂಜಾರಿ, ಎಸ್.ಕೆ. ಸೌಹಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT