ಮಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಅವರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಐಪಿಸಿ 353ನೇ ಕಲಂ ಅನ್ವಯ ಒಬ್ಬ ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಮತ್ತು ಕರ್ತವ್ಯ ನಿರ್ವಹಿಸಲು ಅಡ್ಡಿ ಮಾಡಲಾಗಿದೆ, ಕಲಂ 504, 506ರಂತೆ ಶಾಂತಿಭಂಗ ಮಾಡಲು ಪ್ರಚೋದನೆ ಹಾಗೂ ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ. ಡಿಸಿಪಿ ಅಂಶುಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅವರು ಪರಿಶೀಲಿಸುವ ಭರವಸೆ ನೀಡಿದ್ದಾರೆ’ ಎಂದರು.

ಶಿಕ್ಷಣ ಸಚಿವರಾಗಿರುವ ಅಶ್ವತ್ಥ ನಾರಾಯಣ ಅವರು, ಕೋಮು ಭಾವನೆ ಸೃಷ್ಟಿಸಲು ಯತ್ನಿಸಿ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ತಕ್ಷಣ ಅವರನ್ನು ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸಬೇಕು. ಬಿಜೆಪಿ ಕ್ರಮ ಕೈಗೊಳ್ಳದಿದ್ದಲ್ಲಿ ಎಲ್ಲ ಕಡೆಗಳಲ್ಲಿ ಪ್ರತಿಭಟಿಸಲಾಗುವುದು ಎಂದರು.

ಪ್ರಮುಖರಾದ ಇಬ್ರಾಹಿಂ ಕೋಡಿಜಾಲ್, ಪ್ರಕಾಶ್ ಸಾಲಿಯಾನ್, ಅಪ್ಪಿ, ಸಬಿತಾ ಮಿಸ್ಕಿತ್, ಸೊಹೈಲ್, ಹಬೀಬುಲ್ಲಾ, ನಜೀರ್ ಬಜಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.