ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಪುತ್ತೂರಿನ ನವಚೇತನ ಸ್ನೇಹ ಸಂಗಮ ಮತ್ತು ಅಕಾಲ ಹಲಸು ಸಂಗಮ ಸ್ವಾಗತ ಸಮಿತಿ ವತಿಯಿಂದ ಇದೇ 8ಮತ್ತು 9ರಂದು 'ಅಕಾಲ ಹಲಸು ಸಂಗಮ-2018' ಕಾರ್ಯಕ್ರಮ ನಡೆಯಲಿದ್ದು, ಅಂದು ವಿವಿಧ ಬಗೆಯ ಹಲಸು ಖಾದ್ಯ ಮಾರಾಟ ಮತ್ತು ಪ್ರದರ್ಶನಕ್ಕೆ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ.

ಹಲಸಿನ ಋತು ಮುಗಿದ ಬಳಿಕವೂ ವಿವಿಧ ಬಗೆಯ ಹಲಸಿನ ಖಾದ್ಯಗಳ ಪ್ರದರ್ಶನ, ವಿವಿಧ ತಳಿಯ ಗಿಡಗಳು, ಸಂಪನ್ಮೂಲ ವ್ಯಕ್ತಿಗಳು ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡಲಿದ್ದಾರೆ. 60ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲು ವ್ಯವಸ್ಥೆಗೊಳಿಸಲಾಗಿದೆ. ಆಸಕ್ತರು ಇದೇ 6ರೊಳಗೆ ಕಾಯ್ದಿರಿಸಲು ಅನಂತಪ್ರಸಾದ್ ನೈತ್ತಡ್ಕ (9611543386) ಮತ್ತು ಪಾಂಡುರಂಗ ಭಟ್ ಕುದಿಂಗಿಲ (9741810502) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.