ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇನ್ನೂ ಎರಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಮಧ್ಯಾಹ್ನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜಾರಿಯವರ ಆಶೀರ್ವಾದ ಪಡೆದರು. ಬಳಿಕ ಪೂಜಾರಿ ಪತ್ರಕರ್ತರ ಜೊತೆ ಮಾತನಾಡಿದರು.

ನಳಿನ್ ಕುಮಾರ್ ಕಟೀಲ್ ಅವರಿಗೆ ದೇವರು ಒಳ್ಳೆಯದು ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಮಿಥುನ್ ರೈ ಕೂಡ ಒಳ್ಳೆಯ ಅಭ್ಯರ್ಥಿ. ಆದರೆ, ಪರಿಸ್ಥಿತಿ ಕಾಂಗ್ರೆಸ್ ಪರವಾಗಿ ಇಲ್ಲ. ಎಂದರು.

ಇಡೀ ದೇಶದಲ್ಲಿ ಮೋದಿ ಪರವಾದ ಒಲವು ಇದೆ. ಅವರಿಗೆ ಕೆಲವು ಪ್ಲಸ್ ಪಾಯಿಂಟ್. ಇದರಿಂದಾಗಿ ಇನ್ನೂ ಎರಡು ಚುನಾವಣೆಯಲ್ಲಿ ಗೆದ್ದು ಬರ್ತಾರೆ ಎಂದು ಹೇಳಿದರು.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸುತ್ತಾರೆ. ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣ ತೀರಾ ತಪ್ಪು.

ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ ಸರಿಯಾದ ಪಾಠ ಕಲಿಸುತ್ತಾರೆ. ಈ ರಾಜಕಾರಣಿಗಳೆಂದರೆ ಜನರಿಗೆ ಜುಗುಪ್ಸೆ ಉಂಟಾಗಿದೆ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.