ಮಂಗಳವಾರ, ಏಪ್ರಿಲ್ 7, 2020
19 °C

ವಿಭಾ, ಶ್ರೀಕಾಂತ್‌ಗೆ ಮಾಮ್‌ ಇನ್‌ಸ್ಪೈರ್‌ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆವಿದ್ಯಾರ್ಥಿ ಸಂಘಟನೆ "ಮೀಡಿಯ ಅಲೂಮ್ನಿ ಅಸೋಶಿಯೇಷನ್‌ ಆಫ್ ಮಂಗಳ ಗಂಗೋತ್ರಿ" (ಮಾಮ್) ವತಿಯಿಂದ ನೀಡಲಾಗುವ 2018-19ನೇ ಸಾಲಿನ ಮಾಮ್ ಇನ್‌ಸ್ಪೈರ್ ಪ್ರಶಸ್ತಿಗೆ ಇಬ್ಬರು ಪ್ರತಿಭಾವಂತರು ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ವಿಭಾ ಡೋಂಗ್ರೆ (ಪ್ರಥಮ), ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್‌ನ ವಿದ್ಯಾರ್ಥಿನಿ ಚೇತನಾ ನಾಯಕ್ ಕೆ. (ದ್ವಿತೀಯ) ಆಯ್ಕೆಯಾಗಿದ್ದಾರೆ.

ಪದವಿ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಶ್ರೀಕಾಂತ್ ಪಿ. (ಪ್ರಥಮ), ಆಳ್ವಾಸ್ ಕಾಲೇಜಿನ ಸೋನಿಯ ಎಸ್. (ದ್ವಿತೀಯ) ಸ್ಥಾನ ಗಳಿಸಿದ್ದಾರೆ.

ಬರಹ, ಮಾಧ್ಯಮ ಚಟುವಟಿಕೆಗಳಲ್ಲಿ ಸಕ್ರಿಯತೆ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ತೊಡಗಿಕೊಳ್ಳುವಿಕೆಯನ್ನು ಆಧರಿಸಿ ಈ ಪ್ರಶಸ್ತಿ ಘೋಷಿಸಲಾಗುತ್ತದೆ.

ಈ ಪ್ರಶಸ್ತಿಗಾಗಿ ಕಳೆದ ವರ್ಷ ಅರ್ಜಿ ಆಹ್ವಾನಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ಲೇಖನ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಅಂತಿಮ ಮೌಲ್ಯಮಾಪನ ನಡೆಸಿದ್ದರು. ಇನ್‌ಸ್ಪೈರ್ ಪ್ರಶಸ್ತಿಯು ₹5000 ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ದ್ವಿತೀಯ ಸ್ಥಾನಗಳಿಸಿದವರಿಗೆ ₹1500 ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಗುವುದು.

ಮಾರ್ಚ್‌ 13ರಂದು ಪ್ರಶಸ್ತಿ ಪ್ರದಾನ:
ಮಾಮ್‌ ಇನ್‌ಸ್ಪೈರ್‌ ಸ್ಪರ್ಧಾ ವಿಜೇತರಿಗೆ ಮಾರ್ಚ್‌ 13ರಂದು ಬೆಳಿಗ್ಗೆ 10 ಗಂಟೆಗೆ ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ʼಮಾಮ್‌ʼ ಅಧ್ಯಕ್ಷ ಸುರೇಶ್‌ ಪುದುವೆಟ್ಟು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು