ಬಂಟ್ವಾಳ: ಹೂವಿನಹಡಗಲಿಯ ರಾಜ್ಯ ಬರಹಗಾರರ ಸಂಘದ ವತಿಯಿಂದ ನೀಡಲಾಗುವ ‘ಪತ್ರಕರ್ತ ಸೌರಭ ಪ್ರಶಸ್ತಿ’ಗೆ ಇಲ್ಲಿನ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ.
ಜಯಾನಂದ ಪೆರಾಜೆ ಅವರು ಪತ್ರಕರ್ತರಾಗಿ, ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದಾರೆ. ರಾಜ್ಯ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ.
ಫೆ. 26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬರಹಗಾರರ ಸಂಘದ ಅಧ್ಯಕ್ಷ ಮಧು ನಾಯ್ಕ್ ಹೂವಿನಹಡಗಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.