ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನಿಗೆ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ.

ಪ್ರಕರಣದ ಸಾಕ್ಷಿ ದೂರುದಾರ ‘ತಾನು ಹೂತುಹಾಕಿದ್ದ ಮೃತದೇಹವೊಂದರ ಬುರುಡೆ’ ಎಂದು ಹೇಳಿ ಮನುಷ್ಯನ ತಲೆಬುರುಡೆಯೊಂದನ್ನು ಒಪ್ಪಿಸಿದ್ದ. ನಂತರ ವಿಚಾರಣೆ ವೇಳೆ ‘ಆ ತಲೆಬುರುಡೆ ನಾನು ಹೂತು ಹಾಕಿದ್ದ ಮೃತದೇಹದ್ದಲ್ಲ’ ಎಂದು ಒಪ್ಪಿಕೊಂಡಿದ್ದ. ಆತನನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಬಂಧಿಸಿ, ಆ.23ರಂದು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆತನಿಗೆ ಸೆ.3ರವರೆಗೆ ಎಸ್ಐಟಿ ವಶಕ್ಕೆ ಒಪ್ಪಿಸಿದ್ದ ನ್ಯಾಯಾಲಯ, ನಂತರ ಆತನ ಎಸ್ಐಟಿ ಕಸ್ಟಡಿಯ ಅವಧಿಯನ್ನು ಸೆ. 6ರವರೆಗೆ ವಿಸ್ತರಿಸಿತ್ತು. ಎಸ್ಐಟಿ ಅಧಿಕಾರಿಗಳು ಸಾಕ್ಷಿದೂರುದಾರನನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
.ಧರ್ಮಸ್ಥಳ ಪ್ರಕರಣ: ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸೆಂಥಿಲ್.ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಯೂಟ್ಯೂಬರ್ಗಳಿಗೆ ಆಫರ್: ಸುಮಂತ್ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.