ಶನಿವಾರ, ಜುಲೈ 31, 2021
20 °C

ಶ್ರೀಲಂಕಾದ 38 ಜನರಿಗೆ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ವಾಸವಿದ್ದ ಶ್ರೀಲಂಕಾದ 38 ಜನರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಮಿಳುನಾಡಿನ ಮೂಲಕ ನಗರಕ್ಕೆ ಬಂದಿರುವ ಕುರಿತು ತಮಿಳುನಾಡು ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ನಗರದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಶುಕ್ರವಾರ ಮೂರು ಕಡೆಗಳಲ್ಲಿ ವಾಸವಾಗಿದ್ದ 38 ಜನರನ್ನು ವಶಕ್ಕೆ ಪಡೆದಿದ್ದರು.

ತಮಿಳುನಾಡಿನ ಡಿಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ ನೇತೃತ್ವದ ತಂಡ ನಗರಕ್ಕೆ ಬಂದಿದ್ದು, ತನಿಖೆಗೆ ಅಗತ್ಯ ಸಹಕಾರ ನೀಡುತ್ತಿದೆ. ಪ್ರಕರಣದ ಕುರಿತು ವಿದೇಶಾಂಗ ಸಚಿವಾಲಯಕ್ಕೂ ಮಾಹಿತಿ ರವಾನಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಎನ್‌. ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು