ಕಡಬ (ಉಪ್ಪಿನಂಗಡಿ): ಗುಂಡ್ಯ– ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯ ಕಡೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬುವರು ಚಲಾಯಿಸುತ್ತಿದ್ದ ಟೆಂಪೊ ಟ್ರಾವೆಲ್ಲರ್ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು.

ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 5 ವರ್ಷದ ನಯಾನಿಕಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ನರಸಿಂಹಯ್ಯ, ವಿ. ಮಂಜುನಾಥ, ವಿ. ಗಂಗಾಧರ, ಪವಿತ್ರಾ, ಸಿರಿಪ್ರಿಯಾ, ರತ್ನಮ್ಮ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-29-2026517476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.