ಕಡಬ (ಉಪ್ಪಿನಂಗಡಿ): ತಾಲ್ಲೂಕು ಕೇಂದ್ರ ಕಡಬದಲ್ಲಿ ನ್ಯಾಯಾಲಯ ಪ್ರಾರಂಭವಾಗಬೇಕು ಎಂಬ ಆಗ್ರಹ ಹಿಂದಿನಿಂದಲೂ ಇದ್ದು, ತಾಲ್ಲೂಕಿನ ಬಹುದಿನಗಳ ಬೇಡಿಕೆ ಈಡೇರುತ್ತಿದೆ. ಜೂನ್ 2ರಂದು ಇಲ್ಲಿನ ‘ಗಣೇಶ್ ಬಿಲ್ಡಿಂಗ್’ ಎಂಬ ಖಾಸಗಿ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ನ್ಯಾಯಾಲಯ ಪ್ರಾರಂಭವಾಗಲಿದೆ.

ಶನಿವಾರ ಕಡಬಕ್ಕೆ ಭೇಟಿ ನೀಡಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಕಟ್ಟಡದ 2ನೇ ಮಹಡಿಯಲ್ಲಿ ನ್ಯಾಯಾಲಯ ಪ್ರಾರಂಭಿಸಲು ನಡೆಸಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಜೂನ್ 2ರಂದು ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಸಿದ್ಧತೆಗಳು ಕೊನೆಯ ಹಂತದಲ್ಲಿವೆ. ಮೂಲಸೌಕರ್ಯ ವ್ಯವಸ್ಥೆ ಸರಿಪಡಿಸಿಕೊಂಡು ಅಧಿಕೃತವಾಗಿ ಪ್ರಾರಂಭಿಸಲಾಗುತ್ತದೆ ಎಂದರು.

ಬಾಡಿಗೆ ಕಟ್ಟಡದಲ್ಲಿ ಮೂಲಸೌಕರ್ಯಗಳ ನವೀಕರಣ ಕಾರ್ಯ ಮುಗಿದಿದೆ. ಹೈಕೋರ್ಟ್ನಿಂದ ಅನುಮತಿ ಸಿಕ್ಕಿದೆ. ಕಡಬ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಾಲಯದ ಕಲಾಪಗಳನ್ನು ಇಲ್ಲಿಯೇ ನಡೆಸಲಾಗುತ್ತದೆ. ಪ್ರಸ್ತುತ ಪುತ್ತೂರು ನ್ಯಾಯಾಲಯದಲ್ಲಿರುವ ಕಡಬ ತಾಲ್ಲೂಕು ವ್ಯಾಪ್ತಿಯ ಪ್ರಕರಣಗಳ ಕಡತಗಳನ್ನು ಪ್ರತ್ಯೇಕಿಸಲಾಗಿದೆ. ನ್ಯಾಯಾಲಯ ಪ್ರಾರಂಭವಾಗುವುದರಿಂದ ಕಡಬದ ಸಾರ್ವಜನಿಕರು, ವಕೀಲರಿಗೆ ಸಮಯ, ಹಣ ಉಳಿತಾಯವಾಗಲಿದೆ. ಸ್ಥಳೀಯವಾಗಿ ಶೀಘ್ರ ನ್ಯಾಯ ದೊರೆಯಲು ಸಹಕಾರಿಯಾಗಲಿದೆ ಎಂದರು.

ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಕಲಾಪ ನಡೆಯಲಿದೆ. ನ್ಯಾಯಾಲಯಕ್ಕೆ ಸ್ವಂತ ಕಟ್ಟಡ ನಿರ್ಮಿಸುವ ದೃಷ್ಟಿಯಿಂದ ತಾಲ್ಲೂಕು ಕಚೇರಿ ಬಳಿ 3 ಎಕರೆ ಜಾಗ ಮೀಸಲಿರಿಸಲಾಗಿದೆ. ನೂತನ ಕಟ್ಟಡ ನಿರ್ಮಾಣ ಆಗುವವರೆಗೆ ಬಾಡಿಗೆ ಕಟ್ಟಡದಲ್ಲೇ ಕಾರ್ಯಕಲಾಪ ನಡೆಯಲಿದೆ ಎಂದು ನ್ಯಾಯಾಧೀಶರು ಮಾಹಿತಿ ನೀಡಿದರು.

ವಕೀಲರಾದ ಲೋಕೇಶ್ ಎಂ.ಜೆ., ಶಿವಪ್ರಸಾದ್ ಪುತ್ತಿಲ, ಅವಿನಾಶ್ ಬೈತಡ್ಕ, ಕೃಷ್ಣಪ್ಪ ಗೌಡ ಕಕ್ವೆ, ಮನೋಹರ ಸಬಳೂರು, ಅಶ್ವಿತ್ ಕಂಡಿಗ, ಕೌಶಿಕ್ ಆಲಂಕಾರು, ಅರ್ಪಿತಾ ಪಿ., ಸುಮನಾ ಎಂ., ಕಟ್ಟಡ ಮಾಲೀಕ ಸುಂದರ ಗೌಡ ಮಂಡೆಕರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-2141923704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.