ಕಡಬ(ಉಪ್ಪಿನಂಗಡಿ): ಕಡಬ ಸಮೀಪದ ಕೊರಿಯಾರ್ ಎಂಬಲ್ಲಿ ಸೋಮವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಮರ್ಧಾಳ ನಿವಾಸಿ ಮಂಜು ಎಂಬುವರ ಪುತ್ರ ರಕ್ಷಿತ್ (26) ನಾಪತ್ತೆಯಾದವರು. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಅವರು, ಸ್ನೇಹಿತ ರೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಪ್ರದೇಶಕ್ಕೆ ಸ್ನಾನಕ್ಕಾಗಿ ತೆರಳಿದ್ದರು.

ಅವರು ನಾಪತ್ತೆಯಾದ ಕೂಡಲೇ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸ ರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಹಾಗೂ ಪುತ್ತೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದುರ್ಗಮ ಸ್ಥಳವಾಗಿದ್ದರಿಂದ ಅಗ್ನಿ ಶಾಮಕ ವಾಹನ ಸ್ಥಳಕ್ಕೆ ತೆರಳಲು ಸಾಧ್ಯವಾಗದೆ ಸಿಬ್ಬಂದಿ ನಡೆದು ಕೊಂಡು ಸ್ಥಳಕ್ಕೆ ತಲುಪಿದ್ದಾರೆ. ಅಷ್ಟರಲ್ಲಿ ಕತ್ತಲಾದ ಕಾರಣ ಶೋಧ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಈಶ್ವರ್ ಮಲ್ಪೆ ತಂಡ ಶೋಧ ನಡೆಸಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-1823740155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.