ಕಡಬ (ಉಪ್ಪಿನಂಗಡಿ): ಮನೆ ಮನೆಗೆ ತೆರಳಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ ಆರೋಪದಲ್ಲಿ ಬಲ್ಯ ಗ್ರಾಮದ ನಿವಾಸಿ ಗುರುಪ್ರಸಾದ್ ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರಿನ ಕಂಪನಿಯೊಂದರ ಲೈನ್ಸೇಲ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ ದೂರು ನೀಡಿದ್ದು, ‘ಏ.8ರಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಲ್ಯ ಗ್ರಾಮದ ದೇರಾಜೆ ನಿವಾಸಿ ಗುರುಪ್ರಸಾದ್ ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ’ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ಯುವತಿ ಸಹೋದ್ಯೋಗಿಗಳಿಗೆ ತಿಳಿಸಿದ್ದು, ಆರೋಪಿಯ ವರ್ತನೆಯ ಬಗ್ಗೆ ಆತನ ತಾಯಿಗೆ ತಿಳಿಸಲು ಆತನ ಮನೆಗೆ ತೆರಳಿದ್ದರು. ಈ ವೇಳೆ ಆಕ್ರೋಶಗೊಂಡ ಗುರುಪ್ರಸಾದ್, ತಂಡದಲ್ಲಿದ್ದ ಯುವತಿಯರನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ, ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆರೋಪಿ ಗುರುಪ್ರಸಾದ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-29-1822535481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.