ಕಡಬ (ಉಪ್ಪಿನಂಗಡಿ): ಕಡಬ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ 4 ತಿಂಗಳಾದರೂ ನಡೆಯುತ್ತಿಲ್ಲ, ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಾಸಕರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಕೆಡಿಪಿ ನಾಮನಿರ್ದೇಶಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ನಾಮ ನಿರ್ದೇಶಿತ ಸದಸ್ಯರಾದ ಶಿವರಾಮ ರೈ, ಅಶ್ರಫ್ ಶೇಡಿಗುಂಡಿ, ಮೋನಪ್ಪ, ಪದ್ಮನಾಭ ಗೌಡ, ಗಿರೀಶ್ ಬದನೆ, ಉಷಾ ಜೋಯಿ ತಾ.ಪಂ ಕಚೇರಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥಾಪಕಿ ಭವ್ಯ ಎಂ.ಅವರೊಂದಿಗೆ ಚರ್ಚೆ ನಡೆಸಿದರು.

ಶಿವರಾಮ ರೈ ಮಾತನಾಡಿ, ಜಿಲ್ಲಾ ಮಟ್ಟದ ಕೆಡಿಪಿ ಸಭೆ ಸರಿಯಾದ ಸಮಯದಲ್ಲಿ ನಡೆಯುತ್ತದೆ. ಕಡಬ ತಾಲ್ಲೂಕು ಕೆಡಿಪಿ ಸಭೆಯನ್ನು ನಡೆಸಲು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.

ಅಶ್ರಫ್ ಶೇಡಿಗುಂಡಿ ಮಾತನಾಡಿ, ಸಭೆ ನಡೆಸುವಂತೆ ಒತ್ತಡ ಹಾಕಿದ ಬಳಿಕ ಕಳೆದ ಬಾರಿ ಸಭೆ ನಡೆಸಲಾಗಿದೆ. ಈ ರೀತಿಯಾದರೆ ಜನರ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಯಪಡಿಸುವುದು ಹೇಗೆ ಎಂದು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು. ಶಾಸಕಿ ಸುಳ್ಯದಲ್ಲಿ ಸಭೆ ಮಾಡುತ್ತಾರೆ, ಕಡಬದಲ್ಲಿ ಯಾಕೆ ಮಾಡುತ್ತಿಲ್ಲ ಎಂದರು.

ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳಿರುವುದರಿಂದ ಕಂದಾಯ ಇಲಾಖೆಯ ಸಭೆಯನ್ನು ಪ್ರತ್ಯೇಕವಾಗಿ ನಡೆಸುತ್ತೇವೆ ಎಂದು ಶಾಸಕಿ ಈ ಹಿಂದಿನ ಸಭೆಯಲ್ಲಿ ಹೇಳಿದ್ದರು. ಇದೀಗ ಆ ಸಭೆಯೂ ನಡೆಯುತ್ತಿಲ್ಲ. ಪಾಲನಾ ವರದಿ ನೀಡುವಂತೆ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು.

ಈ ಬಗ್ಗೆ ಉತ್ತರಿಸಿದ ವ್ಯವಸ್ಥಾಪಕರು, ಸಿಬ್ಬಂದಿ ಕೊರತೆ ಹಾಗೂ ಸಮಯದ ಅಭಾವದಿಂದ ಸಭೆ ನಡೆಸಲು ವಿಳಂಬವಾಗಿದೆ. ಕೂಡಲೇ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ, ಪಾಲನಾ ವರದಿಯನ್ನು ನೀಡಿದರು.

ಇದೇ ರೀತಿ ಮುಂದುವರಿದರೆ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟು ಸಚಿವರಿಗೆ ದೂರು ನೀಡಲಾಗುವುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1396051341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.