ಉಪ್ಪಿನಂಗಡಿ: ಐರ್ಲೆಂಡ್ನಲ್ಲಿ ಉದ್ಯೋಗದಲ್ಲಿದ್ದ ಕಡಬ ತಾಲ್ಲೂಕಿನ ಕುಟ್ರುಪಾಡಿ ವಿಮಲಗಿರಿಯ ಸಾಂಜೊ ಸುನಿಲ್ (31) ಅಲ್ಲಿ ತನ್ನ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ.

‘ಐರ್ಲೆಂಡ್ನ ಡಬ್ಲಿನ್ ನಗರದ ಫಿಂಗ್ಲಾಸ್ ಚಾರ್ಲ್ಸ್ಟೌನ್ ಪ್ರದೇಶದಲ್ಲಿ ಅವರು ವಾಸವಾಗಿದ್ದರು. ಸಾಂಜೊ ಸುನಿಲ್ ವಾಸವಿದ್ದ ಮನೆಯಲ್ಲಿ ಗುರುವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಐರಿಷ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದಿದೆ. ತನಿಖೆ ಆರಂಭಿಸಲಾಗಿದೆ ಎಂದು ಅಲ್ಲಿನ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ. ಮೃತರಿಗೆ ಪತ್ನಿ, ತಂದೆ, ತಾಯಿ, ಇಬ್ಬರು ಸಹೋದರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.