ಮಂಗಳವಾರ, ನವೆಂಬರ್ 29, 2022
21 °C

ಕಡಬದ್ವಯ ಯಕ್ಷಗಾನ ಪ್ರಶಸ್ತಿಗೆ ಸುಬ್ರಹ್ಮಣ್ಯ ಶಾಸ್ತ್ರಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕಡಬ ಸಂಸ್ಮರಣಾ ಸಮಿತಿ ರಥಬೀದಿ ಮಂಗಳೂರು ವತಿಯಿಂದ ನೀಡುವ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿಗೆ ಮದ್ದಳೆಗಾರ ಸುಬ್ರಹ್ಮಣ್ಯ ಶಾಸ್ತ್ರಿ ಮಣಿಮುಂಡ ಆಯ್ಕೆಯಾಗಿದ್ದಾರೆ.

ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳವಾದಕ ಕಡಬ ನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಕಡಬ ವಿನಯ ಆಚಾರ್ಯ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತಿದೆ. ಅ.9ರಂದು ಮಧ್ಯಾಹ್ನ 1.45ಕ್ಕೆ ಗುರುಪುರ ಕೈಕಂಬದ ಕಿನ್ನಿಕಂಬಳ ರಾಧಾಕೃಷ್ಣ ಭಜನಾ ಮಂದಿರದಲ್ಲಿ ತೃತೀಯ ವರ್ಷದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಮಂಗಳೂರು ರಥಬೀದಿ ಕಾಳಿಕಾಂಬಾ ವಿನಾಯಕ ದೇವಸ್ಥಾನ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣದಾಸ ಆಸ್ರಣ್ಣ, ಉದ್ಯಮಿಗಳಾದ ಅಗರಿ ರಾಘವೇಂದ್ರ ರಾವ್, ಶ್ರೀಧರ ರಾವ್ ಕೈಕಂಬ, ಗಣೇಶ ಆಚಾರ್ಯ, ರಾಧಾಕೃಷ್ಣ ಭಜನಾ ಯುವಕ ಸಂಘ ಅಧ್ಯಕ್ಷ ಎಂ. ನರಸಿಂಗ ರೈ, ಕಡಬ ಸಂಸ್ಮರಣಾ ಸಮಿತಿ ಗೌರವಾಧ್ಯಕ್ಷ ಜಿ.ಟಿ. ಆಚಾರ್ಯ ಮುಂಬೈ ಭಾಗವಹಿಸುವರು. ಅರ್ಥಧಾರಿ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡುವರು. ಕಲಾವಿದ ಎಂ.ಕೆ. ರಮೇಶ ಆಚಾರ್ಯ ಸಂಸ್ಮರಣಾ ಭಾಷಣ ಮಾಡುವರು. ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ಧರ್ಮೋ ರಕ್ಷತಿ ರಕ್ಷಿತಃ’ ಯಕ್ಷಗಾನ ತಾಳಮದ್ದಳೆ ಆಯೋಜಿಸಲಾಗಿದೆ ಎಂದು ಸಮಿತಿ ಕಾರ್ಯದರ್ಶಿ ಗಿರೀಶ್ ಕಾವೂರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು