ಮೂಡುಬಿದಿರೆ: ಕಡಲಕೆರೆಯಲ್ಲಿ ಸೇವಾಂಜಲಿ ಎಜುಕೇಶನ್ ಟ್ರಸ್ಟ್ ಅಧೀನದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ (ಸೇಂಟ್ ಇಗ್ನೇಶಿಯಸ್ ಶಾಲೆ)ಯ ಶತ ಮಾನೋತ್ಸವ ಸಮಾರಂಭವು ಇದೇ 18 ಮತ್ತು 19ರಂದು ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಶಾಂತರಾಮ ಕುಡ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

18ರಂದು ಬೆಳಿಗ್ಗೆ 9.30ಕ್ಕೆ ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದ ಮೊಕ್ತೇಸರ ದಯಾನಂದ ಪೈ ಧ್ವಜಾರೋಹಣ ನೆರವೇರಿಸುವರು.19ರಂದು ಬೆಳಿಗ್ಗೆ 10ಕ್ಕೆ ಶಾಲೆಯ ಹಳೆ ವಿದ್ಯಾರ್ಥಿ, ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟೀಸ್ ಅಬ್ದುಲ್ ನಝೀರ್ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸುವರು. ಸ್ವಯಂ ಸೇವಕ ಸಂಘದ ಪ್ರಕಾಶ್ ಪಿ.ಎಸ್ ಮಾತನಾಡುವರು. ಶಾಸಕ ಉಮಾನಾಥ ಕೋಟ್ಯಾನ್, ಮುಖಂಡ ಅಭಯಚಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ. ಸೇವಾಂಜಲಿ ಟ್ರಸ್ಟ್ನ ಅಧ್ಯಕ್ಷ ರಾಜೇಶ್ ಕಡಲಕೆರೆ, ಸಂಚಾಲಕ ಶಾಂತರಾಮ ಕುಡ್ವ, ಶಾಲಾ ಮುಖ್ಯಶಿಕ್ಷಕಿ ವತ್ಸಲಾ ರಾಜೇಶ್ ಉಪಸ್ಥಿತರಿರುವರು. ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-29-945072967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.