ಮಂಗಳೂರು: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಾಬರಿ ಮಸೀದಿ ಧ್ವಂಸ ಅಣಕು ಪ್ರದರ್ಶನ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಆರ್. ಸೆಲ್ವಮಣಿ, ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಶಾಲೆಯ ವಾರ್ಷಿಕೋತ್ಸವದಲ್ಲಿ ಕೋಮು ಸಾಮರಸ್ಯ ಕೆಡಿಸುವ ನಾಟಕವನ್ನು ಮಕ್ಕಳಿಂದ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿ ಎಂದು ಹೇಳಿದರು.

ವಾರ್ಷಿಕ ಕ್ರೀಡೋತ್ಸವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಅಣಕು ಪ್ರದರ್ಶನ ಮಾಡಲಾಗಿತ್ತು. ಈ ಕುರಿತಂತೆ ಕಲ್ಲಡ್ಕ ಡಾ.ಪ್ರಭಾಕರ ಭಟ್ ಮತ್ತು ಇತರರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಮುಂದಿನ ಕ್ರಮಕ್ಕೆ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.