ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಗಂಗೋತ್ರಿ ಟ್ರಸ್ಟ್ ಸುವರ್ಣ ಮಹೋತ್ಸವ ಸೆ.4ಕ್ಕೆ

Last Updated 1 ಸೆಪ್ಟೆಂಬರ್ 2022, 16:39 IST
ಅಕ್ಷರ ಗಾತ್ರ

ಮಂಗಳೂರು: ಸೋಮೇಶ್ವರ-ಉಚ್ಚಿಲದ ಕಲಾಗಂಗೋತ್ರಿ ಯಕ್ಷಗಾನ ಕೇಂದ್ರ ಟ್ರಸ್ಟ್‌ನ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ಸೆ.4ರಂದು ಸಂಜೆ 5 ಗಂಟೆಗೆ ಉಚ್ಚಿಲ ಬೋವಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ ಸದಸ್ಯ ಕೆ.ಸದಾಶಿವ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಕ್ಷಗಾನ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅಧ್ಯಕ್ಷತೆ ವಹಿಸುವರು. ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಎಂ.ದಾಮೋದರ ಶೆಟ್ಟಿ ಭಾಗವಹಿಸುವರು. ಕಲಾಗಂಗೋತ್ರಿ ಸ್ಥಾಪಕ ಸತ್ಯಶಂಕರ ಬೊಳ್ಳಾವ, ಕಲಾಗಂಗೋತ್ರಿ ಸದಸ್ಯ, ಗುರು ಸುರೇಶ ರಾವ್ ಕೋಟೆಕಾರ್ ಅವರಿಗೆ ಸುವರ್ಣ ಮಹೋತ್ಸವ ಗೌರವ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ವಿಷಯಾ ವಿಭ್ರಮ’ ಮತ್ತು ‘ಪೂತನಾ ಮೋಕ್ಷ‘ ಏಕವ್ಯಕ್ತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ವಿದ್ವಾಂಸರಾದ ಅಮೃತ ಸೋಮೇಶ್ವರ ಮತ್ತು ದಿ.ರಾಮಚಂದ್ರ ಉಚ್ಚಿಲರ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಕಲಾಗಂಗೋತ್ರಿ ಸಂಸ್ಥೆಯು ಯಕ್ಷಗಾನ ಕಲೆಗೆ ಸಂಬಂಧಿಸಿದ ಅನೇಕ ಕಮ್ಮಟ, ವಿಚಾರ ಸಂಕಿರಣ, ಪ್ರಾತ್ಯಕ್ಷಿಕೆ ಮತ್ತು ದಾಖಲಾತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಕಲೆಗೆ ಸಂಬಂಧಿಸಿದ ಹಲವು ಗ್ರಂಥಗಳನ್ನು ಪ್ರಕಟಿಸಿದೆ ಎಂದರು. ಟ್ರಸ್ಟ್‌ ಪ್ರಮುಖರಾದ ಸತೀಶ ಕಾರಂತ, ದಯಾನಂದ ಪಿಲಿಕೂರು, ಕೆ.ಎ.ಶೆಟ್ಟಿ, ಕೃಷ್ಣಪ್ಪ ಕೋಟೆಕಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT