ಗುರುವಾರ , ಡಿಸೆಂಬರ್ 8, 2022
18 °C
ಕಕ್ಯಪದವು: ಶ್ರೀರಾಮಾಂಜನೇಯ ಗೆಳೆಯರ ಬಳಗದ ದಶಮಾನೋತ್ಸವ

‘ಸತ್ಯ- ಧರ್ಮ’ ಕಂಬಳ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ತಾಲ್ಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ದಶಮಾನೋತ್ಸವ ಸಂಭ್ರಮ ಮತ್ತು 10ನೇ ವರ್ಷದ 'ಸತ್ಯ- ಧರ್ಮ' ಜೋಡುಕರೆ ಬಯಲು ಕಂಬಳ ನ. 26ರಂದು ಮೈರ- ಬರ್ಕೆಜಾಲುಯಲ್ಲಿ ನಡೆಯಲಿದೆ.

ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಗೌರವಾಧ್ಯಕ್ಷತೆ ಮತ್ತು ಕುಸುಮಾಧರ ಉರ್ಕೆ ಅಧ್ಯಕ್ಷತೆಯಲ್ಲಿ ಕಂಬಳ ನಡೆಯಲಿದೆ. ಈ ಕೂಟದಲ್ಲಿ ಸುಮಾರು 200 ಜೋಡಿ ಓಟದ ಕೋಣಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ ಉಳಿ ಗೋಪಾಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಯೋಗೀಂದ್ರ ಭಟ್ ಕಂಬಳಕ್ಕೆ ಚಾಲನೆ ನೀಡಲಿದ್ದು, ಸಂಜೆ ನಡೆಯುವ ಸಮಾರೋಪದಲ್ಲಿ ಸಚಿವರಾದ ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಮತ್ತಿತರರು ಭಾಗವಹಿಸುವರು. ರಾಜ್ಯೋತ್ಸವ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಪದಾಧಿಕಾರಿಗಳಾದ ಸಾಂತಪ್ಪ ಪೂಜಾರಿ ಹಟದಡ್ಕ, ಸುರೇಶ್ ಮೈರ, ರಂಜಿತ್ ಮೈರ, ರವೀಂದ್ರ ಶೆಟ್ಟಿ, ಯಶೋಧರ ಕರ್ಬಟ್ಟು ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.