ಶುಕ್ರವಾರ, ಡಿಸೆಂಬರ್ 4, 2020
25 °C
ಸಮಿತಿ ಮನವಿ ಸ್ವೀಕರಿಸಿದ ಸಚಿವ ಕೋಟ, ಸಂಸದ ನಳಿನ್‌

ಕಂಬಳ: ಕೇಂದ್ರದ ಮಾರ್ಗಸೂಚಿ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ಆಯೋ ಜಿಸಲು ಅನುಮತಿ ನೀಡುವಂತೆ ಉಭಯ ಜಿಲ್ಲೆಗಳ ಕಂಬಳ ಸಮಿತಿ ಪದಾಧಿಕಾರಿಗಳು ಸಂಸದ ನಳಿನ್‌ ಕುಮಾರ್ ಕಟೀಲ್‌, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ನೇತೃತ್ವದಲ್ಲಿ ಉಪಾಧ್ಯಕ್ಷ ನವೀನ್‌ಚಂದ್ರ ಆಳ್ವ, ಗೌರವಾಧ್ಯಕ್ಷ ಬಾರ್ಕೂರು ಶಾಂತ
ರಾಮ ಶೆಟ್ಟಿ ಅವರನ್ನು ಒಳಗೊಂಡ ನಿಯೋಗ, ಸಂಸದ ಹಾಗೂ ಸಚಿವರಿಗೆ ಮನವಿ ಸಲ್ಲಿಸಿತು. ಐತಿಹಾಸಿಕ ಕಂಬಳ ತುಳುನಾಡಿನ ಸಂಸ್ಕೃತಿಯಾಗಿದ್ದು, ಉಭಯ ಜಿಲ್ಲೆ ಗಳಲ್ಲಿ ಕಂಬಳ ಆಯೋಜಿಸಲು ಅನು ಮತಿ ನೀಡಬೇಕು ಮನವಿ ಮಾಡಿತು.

ಕೋವಿಡ್‌–19 ಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿಕೊಂಡು, ಅಗತ್ಯ ಮುಂಜಾಗ್ರತೆಗಳೊಂದಿಗೆ ಕಂಬಳ ಆಯೋಜಿಸಲಾಗುವುದು ಎಂದು ಸಮಿತಿ ಭರವಸೆ ನೀಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂಬಳ ಆಯೋಜಿಸಲು ಸರ್ಕಾರ ಉತ್ಸುಕವಾಗಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ನೋಡಿ ಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಂಸದ ನಳಿನ್‌ಕುಮಾರ್‌ಕಟೀಲ್‌, ‘ದೇಶದ ಆರ್ಥಿಕ ಪರಿಸ್ಥಿತಿ ಚೇತರಿಕೆ ಹಾದಿಯಲ್ಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮತ್ತಷ್ಟು ಸಡಿಲಿಕೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ. ಹೊಸ ಮಾರ್ಗಸೂಚಿಯನ್ನು ನೋಡಿಕೊಂಡು ಕಂಬಳ ಆಯೋಜನೆಗೆ ಕ್ರಮ ಕೈಗೊಳ್ಳ ಲಾಗುವುದು’ ಎಂದು ತಿಳಿಸಿದರು.

ದೈವಾರಾಧನೆ, ಕೃಷಿಯಂತೆಯೇ ಕಂಬಳವೂ ತುಳುನಾಡಿನ ಸಂಸ್ಕೃತಿಯಾಗಿದೆ. ಕಂಬಳ ಆಯೋಜನೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಕಂಬಳ ಆಯೋಜನೆಗೆ ಸಮಿತಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.