ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರ ಕಂಬಳದಲ್ಲಿ ವಿವಿಧ ಸಾಧಕರಿಗೆ ಸನ್ಮಾನ

Published 18 ಡಿಸೆಂಬರ್ 2023, 13:30 IST
Last Updated 18 ಡಿಸೆಂಬರ್ 2023, 13:30 IST
ಅಕ್ಷರ ಗಾತ್ರ

ಮೂಡುಬಿದಿರೆ: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಬರೋಡ ತುಳು ಸಂಘದ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ಅವರನ್ನು ಗೌರವಿಸಲಾಯಿತು.

ಗಂತಿನಲ್ಲಿ ಕೋಣಗಳನ್ನು ನಿಯಂತ್ರಿಸುವ ದಾಮೋದರ ಪೂಜಾರಿ ಕಡಂದಲೆ, ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೆ. ಆಚಾರ್ಯ, ಕಂಬಳದಲ್ಲಿ ಬರವಣಿಗೆ ಮಾಡುವ ಸಂಕಪ್ಪ ಶೆಟ್ಟಿ ನಗ್ರಿ, ಕಂಬಳ ಕ್ಷೇತ್ರದಲ್ಲಿ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಹೊಸಮನೆ ಉಮೇಶ ಮಹಾಬಲ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವಿ.ಸುನೀಲ್ ಕುಮಾರ್, ರಾಜೇಶ್ ನಾಯ್ಕ್‌, ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ., ಬಿಜೆಪಿ ಮಂಡಲಾಧ್ಯಕ್ಷ ಸುನೀಲ್ ಆಳ್ವ, ಮೂಡಾದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ದಕ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಕೆ.ಗುಣಪಾಲ ಕಡಂಬ, ಕೋಶಾಧಿಕಾರಿ ಭಾಸ್ಕರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT