ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಬಳವನ್ನು ವಿಶ್ವ ವ್ಯಾಪಿಯಾಗಿ ಪರಿಚಯಿಸುವ ಕಾರ್ಯ: ಶಾಸಕ ಅಶೋಕ್ ರೈ

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಭೆಯಲ್ಲಿ ಶಾಸಕ ಅಶೋಕ್ ರೈ ಹೇಳಿಕೆ
Published 28 ಜನವರಿ 2024, 15:24 IST
Last Updated 28 ಜನವರಿ 2024, 15:24 IST
ಅಕ್ಷರ ಗಾತ್ರ

ಪುತ್ತೂರು: ‘ಬೆಂಗಳೂರಿನಲ್ಲಿ ಕಂಬಳ ಆಯೋಜಿಸಿ ಕಂಬಳ ಕ್ರೀಡೆಯನ್ನು ವಿಶ್ವಕ್ಕೇ ಪರಿಚಯಿಸಿದ್ದೇವೆ. ಮುಂದಿನ ದಿನಗಳಲ್ಲಿ ಮುಂಬೈ, ದೆಹಲಿ, ದುಬೈನಲ್ಲಿ ಕಂಬಳ ಕೂಟ ಆಯೋಜಿಸುವ ಮೂಲಕ ಕಂಬಳ ಕ್ರೀಡೆಯನ್ನು ವಿಶ್ವವ್ಯಾಪ್ತಿಗೆ ಸೇರಿಸುವ ಕೆಲಸ ಮಾಡಲಿದ್ದೇವೆ’ ಎಂದು ಶಾಸಕ ಅಶೋಕ್‌ಕುಮಾರ್‌ ರೈ ಹೇಳಿದರು.

ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಆಶ್ರಯದಲ್ಲಿ ಇಲ್ಲಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಹಮ್ಮಿಕೊಂಡಿದ್ದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಂಬಳ ಕ್ರೀಡೆಗೆ ಪೇಟಾದವರು ಸುಮಾರು 15 ವರ್ಷದಿಂದ ತೊಂದರೆ ಕೊಟ್ಟಿದ್ದಾರೆ. ಆದರೆ, ನಾವು ಯಾವತ್ತೂ ಜಗ್ಗಲಿಲ್ಲ. ಕಂಬಳದಿಂದಾಗಿ ನಮಗೆ ಗೌರವ ಬಂದಿದೆ. ಅದನ್ನು ಉಳಿಸಬೇಕಿದೆ ಎಂದರು.

ಮಾಜಿ ಸಚಿವ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಗೌರವಾಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ಕಂಬಳಕ್ಕೆ ಎದುರಾಗಿದ್ದ ಸಮಸ್ಯೆ ನಿವಾರಿಸಿ, ಅನೇಕ ವರ್ಷಗಳ ಕಂಬಳಾಭಿಮಾನಿಗಳ ಕನಸನ್ನು ನನಸಾಗಿಸುವ ಕೆಲಸ ಶಾಸಕ ಅಶೋಕ್‌ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆಗಿದೆ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತಿಲ ಪರಿವಾರದ ಸ್ಥಾಪಕ ಅರುಣ್ಕುಮಾರ್ ಪುತ್ತಿಲ, ಸಿನಿಮಾ ನಟಿಯರಾದ ಸೋನು ಗೌಡ, ನೇಹಾ ಗೌಡ, ರೂಪೇಶ್ ಶೆಟ್ಟಿ, ಬ್ಯಾಂಕ್‌ ಆಫ್ ಬರೋಡಾದ ಪ್ರಾದೇಶಿ ಮ್ಯಾನೇಜರ್ ದೇವಿಪ್ರಸಾದ್ ಶೆಟ್ಟಿ, ಕಾನತ್ತೂರು ಕ್ಷೇತ್ರದ ಮಾಧವನ್ ನಾಯರ್ ಮಾತನಾಡಿದರು.

ಪ್ರಮುಖರಾದ ದಿನೇಶ್ ಕುಲಾಲ್ ಪಿ.ವಿ., ಈಶ್ವರ ಭಟ್ ಪಂಜಿಗುಡ್ಡೆ, ಕೃಷ್ಣಪ್ರಸಾದ್ ಆಳ್ವ, ರಾಕೇಶ್ ಮಲ್ಲಿ, ಡಾ.ರಾಜಾರಾಮ್, ಮಹಮ್ಮದ್ ಬಡಗನ್ನೂರು, ಎಚ್.ಮಹಮ್ಮದ್ ಅಲಿ, ಸತೀಶ್ ಕೆಡೆಂಜಿ, ಪದ್ಮನಾಭ ಶೆಟ್ಟಿ, ಉಮೇಶ್ ನಾಡಾಜೆ, ಸುದೇಶ್ ಶೆಟ್ಟಿ ಶಾಂತಿನಗರ, ನಿಹಾಲ್ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು, ಭೋಜರಾಜ್ ರೈ, ನಾರಾಯಣ ರೈ ಕುಕ್ಕುವಳ್ಳಿ ಭಾಗವಹಿಸಿದ್ದರು.

ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಸಂಚಾಲಕ ಕೆ.ವಸಂತ ಕುಮಾರ್ ರೈ ದುಗ್ಗಳ ವಂದಿಸಿದರು. ಕಂಬಳ ಸಮಿತಿಯ ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.

ಸಾಧಕರಾದ ಮಾಣಿಸಾಗು ಉಮೇಶ್ ಶೆಟ್ಟಿ (ಕಂಬಳ), ಕೇಶವ ಗೌಡ ಅಮೈ (ಉದ್ಯಮ), ರವೀಂದ್ರ ಶೆಟ್ಟಿ ನುಳಿಯಾಲು (ಧಾರ್ಮಿಕ ಕ್ಷೇತ್ರ), ಜೈಗುರು ಆಚಾರ್ ಹಿಂದಾರ್ (ಹೈನುಗಾರಿಕೆ), ಕಡಬ ಶ್ರೀನಿವಾಸ ರೈ (ಯಕ್ಷಗಾನ) ಅವರನ್ನು ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT