ಮೂಲ್ಕಿ: ಕಂಬಳವು ತುಳುನಾಡಿನ ಸಂಸ್ಕಾರ ಹಾಗೂ ಸಂಸ್ಕೃತಿಯ ಪ್ರತೀಕವಾಗಿದ್ದು, ಇಲ್ಲಿನ ಜೀವನಾಡಿಯಾಗಿರುವ ಕಂಬಳಕ್ಕೆ ಎಂದಿಗೂ ಅಡ್ಡಿಯಾಗುವ ವಾತಾವರಣ ನಿರ್ಮಾಣವಾಗಬಾರದು. ಗ್ರಾಮೀಣ ಬದುಕನ್ನು ಅನಾವರಣಗೊಳಿಸುವ ಸಂಪ್ರದಾಯವನ್ನು ಪ್ರೋತ್ಸಾಹಿಸಿದರೆ ಮುಂದಿನ ಪೀಳಿಗೆಗೆ ಅದು ತಲುಪಲು ಸಾಧ್ಯವಿದೆ ಎಂದು ಬೆಂಗಳೂರಿನ ಆಧ್ಯಾತ್ಮಿಕ ಗುರು ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಕಿನ್ನಿಗೋಳಿ ಬಳಿಯ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಶ್ರೀಪಾದ ಅವರು ಐಕಳೋತ್ಸವದ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿದರು.

ಏಳಿಂಜೆ ದೇವಸ್ಥಾನದ ಅರ್ಚಕರಾದ ಗಣೇಶ್ ಭಟ್ ಹಾಗೂ ವರುಣ್ ಭಟ್ ಧಾರ್ಮಿಕ ವಿಧಿ ವಿಧಾನ ನಡೆಸಿಕೊಟ್ಟರು.

ಕಟೀಲು ಕಮಲಾದೇವಿ ಪ್ರಸಾದ್ ಆತ್ರಣ್ಣ, ಕಿರೆಂ ಚರ್ಚ್ನ ಓಸ್ವಾಲ್ಡ್ ಮೊಂತೆರೊ, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ರಜನಿ ಸಿ.ಭಟ್, ರಾಹುಲ್ ಭಟ್, ರಾಘವ ಸೂರ್ಯ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ಕುಮಾರ್ ಶೆಟ್ಟಿ, ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಮುಂಬೈ ಸಮಿತಿಯ ಕುಶಲ್ ಭಂಡಾರಿ, ಚಿತ್ತರಂಜನ್ ಭಂಡಾರಿ, ಮುರಳಿಧರ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಪ್ರಕಾಶ್ ಶೆಟ್ಟಿ, ಲೀಲಾಧರ ಶೆಟ್ಟಿ ಬಕಳ, ಭುವನಾಭಿರಾಯ ಉಡುಪ, ಶರತ್ ಶೆಟ್ಟಿ, ಸಾಯಿನಾಥ ಶೆಟ್ಟಿ ಭಾಗವಹಿಸಿದ್ದರು.

ಚಂದ್ರಶೇಖರ ಸ್ವಾಮೀಜಿ, ರಜನಿ ಸಿ.ಭಟ್, ಗಣೇಶ್ ಭಟ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.