ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ರಂದು ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳ

Last Updated 18 ಮಾರ್ಚ್ 2021, 2:58 IST
ಅಕ್ಷರ ಗಾತ್ರ

ಬೆಳ್ತಂಗಡಿ: ವೇಣೂರು– ಪೆರ್ಮುಡದಲ್ಲಿ 28ನೇ ವರ್ಷದ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳ ಇದೇ 20ರಂದು ನಡೆಯಲಿದೆ.

ಬೆಳಿಗ್ಗೆ 8.30ಕ್ಕೆ ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ ಅಜಿಲರು ಉದ್ಘಾಟಿಸಲಿದ್ದು, ಕಂಬಳ ಸಮಿತಿಯ ಕೋಶಾಧಿಕಾರಿ ಅಶೋಕ್ ಪಾಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ತಹಶೀಲ್ದಾರ್ ಮಹೇಶ್ ಜೆ, ವೇಣೂರು ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ವಿಜಯರಾಜ್ ಅಧಿಕಾರಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ವೇಣೂರು ಕ್ರಿಸ್ತರಾಜ ದೇವಾಲಯದ ಧರ್ಮಗುರು ಪೀಟರ್ ಅರಾನ್ಹ, ಕುಂಡದಬೆಟ್ಟು ಜುಮ್ಮ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್ ಸಖಾಫಿ ಬಂಗೇರಕಟ್ಟೆ ಭಾಗವಹಿಸಲಿದ್ದಾರೆ.

‘ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ವಹಿಸಲಿದ್ದು, ಸಚಿವರಾದ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಹರೀಶ್ ಪೂಂಜ, ಸುನೀಲ್ ಕುಮಾರ್, ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಗಂಗಾಧರ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗವಹಿಸಲಿದ್ದಾರೆ’ ಎಂದು ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT