ಭಾನುವಾರ, ಏಪ್ರಿಲ್ 2, 2023
33 °C
ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯಲ್ಲಿ ಕನ್ನಡ ಹಬ್ಬಕ್ಕೆ ಚಾಲನೆ

‘ಕನ್ನಡ ಕೇವಲ ಭಾಷೆಯಲ್ಲ, ಬದುಕು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ‘ಕನ್ನಡ ಕೇವಲ ಭಾಷೆಯಲ್ಲ ಅದು ಬದುಕು. ವಿದ್ಯಾರ್ಥಿಗಳು ಕನ್ನಡ ಪ್ರೀತಿ ಬೆಳೆಸುವುದರಿಂದ ಅವರ ಬದುಕು ಭದ್ರವಾಗುತ್ತದೆ. ಕನ್ನಡದ ರಥ ಮುಂದುವರಿಯಬೇಕಾದರೆ ಕನ್ನಡದ ಓದು, ಬರಹ ನಿರಂತರವಾಗಬೇಕು. ಆ ನಿಟ್ಟಿನಲ್ಲಿ ಎಕ್ಸಲೆಂಟ್ ಸಂಸ್ಥೆ ನಡೆಸುತ್ತಿರುವ ಕನ್ನಡ ಹಬ್ಬ ಕನ್ನಡದ ಅಸ್ಮಿತೆ ಉಳಿಸುವಲ್ಲಿ ದೊಡ್ಡ ಪ್ರಯತ್ನ ಮಾಡುತ್ತಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದರು.

ಇಲ್ಲಿನ ಎಕ್ಸಲೆಂಟ್ ಸಮೂಹ ಸಂಸ್ಥೆಗಳಲ್ಲಿ ಮೂರು ದಿನ ನಡೆಯುವ ಕನ್ನಡ ಹಬ್ಬವನ್ನು ಶುಕ್ರವಾರ ಉದ್ಘಾಟಿಸಿ ಮಾತಾನಾಡಿದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಅಭಯಚಂದ್ರ ಜೈನ್, ಕನ್ನಡ ಮಾತನಾಡುವುದೇ ಕನ್ನಡಿಗರಿಗೆ ಹಬ್ಬ. ಪ್ರತಿಯೊಬ್ಬರು ವ್ಯವಹಾರಿಕ ನಡೆಯಲ್ಲಿ ಕನ್ನಡವನ್ನು ಮರೆಯದೆ ಮುಂದುವರಿಯಬೇಕು. ಕನ್ನಡದ ಜತೆಗೆ ಇಂಗ್ಲಿಷ್ ಕೂಡ ಇಂದಿನ ಪೈಪೋಟಿ ಯುಗದಲ್ಲಿ ಅಗತ್ಯ ಎಂದರು.

ಮಂಗಳೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಉದ್ಯಮಿ ಶ್ರೀಪತಿ ಭಟ್, ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪ್ರಾಚಾರ್ಯ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಡಾ.ವಾದಿರಾಜ್ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು