ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಡಿಸಿ ಸೂಚನೆ

Last Updated 19 ಅಕ್ಟೋಬರ್ 2021, 4:22 IST
ಅಕ್ಷರ ಗಾತ್ರ

ಮಂಗಳೂರು: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ಎಚ್ಚರಿಕೆ, ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮುನಡೆಸಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಾಬ್ದಾರಿ ವಹಿಸಬೇಕು ಎಂದರು. ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ ಕ್ರೀಡಾಂಗಣ ಶುಚೀಕರಣ, ಸಮತಟ್ಟು ಮಾಡುವ ಕೆಲಸ ನಡೆಸಬೇಕು, ಮಳೆಗೆ ಪೆಂಡಾಲ್‍ಗಳನ್ನು ಹಾಕಬೇಕು ಎಂದು ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.

ಡಿಸಿಪಿ ಹರಿರಾಂ ಶಂಕರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಕ್ರಮ್ ಶಾ, ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಮಾಣಿಕ್ಯ, ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT