ಮೂಡುಬಿದಿರೆ (ದಕ್ಷಿಣ ಕನ್ನಡ): ಕಾಂತಾವರ ಕನ್ನಡ ಸಂಘವು ವಿವಿಧ ದತ್ತಿನಿಧಿ ಪ್ರಶಸ್ತಿ ಹಾಗೂ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಿದೆ.

ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಮುಳಿಯ ಶಂಕರ ಭಟ್ಟ, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಪದ್ಯಾಣ ಗಣಪತಿ ಭಟ್, ಕಾರ್ಕಳದ ಶಿಲ್ಪಿ ದಿ.ಕೆ.ಶ್ಯಾಮರಾಯ ಆಚಾರ್ಯ ಅವರ ದತ್ತಿನಿಧಿಯ ‘ಶಿಲ್ಪಕಲಾ ಪ್ರಶಸ್ತಿ’ಗೆ ಪಿ.ದಾಮೋದರ ಆಚಾರ್ಯ ಕಾರ್ಕಳ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಂಘದ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದ ಜೀವಮಾನದ ಸಾಧನೆಗಾಗಿ ನೀಡಲಾಗುವ ವಾರ್ಷಿಕ ಗೌರವ ಪ್ರಶಸ್ತಿಗೆ ಶಕುಂತಳಾ ಭಟ್ ಹಳೆಯಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್ 15ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಪ್ರೊ.ಡಿ.ಎ. ಶಂಕರ್ ಮೈಸೂರು ಅವರಿಗೆ 2025ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದತ್ತಿನಿಧಿಯ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಹಾಗೂ ವಾರ್ಷಿಕ ಗೌರವ ಪ್ರಶಸ್ತಿಯು ₹ 5 ಸಾವಿರ ನಗದು ಒಳಗೊಂಡಿದೆ.

ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದ ಉದ್ಘಾಟನೆಯನ್ನು ಕವಿ ಬೆಂಗಳೂರಿನ ಪ್ರೊ.ಟಿ.ಯಲ್ಲಪ್ಪ ನೆರವೇರಿಸುವರು. ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ 9 ಹೊಸ ಕೃತಿಗಳನ್ನು ಹಂಪಿ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕ ಎ.ಸುಬ್ಬಣ್ಣ ರೈ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂತಾವರ ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.