ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ ಕಂಬಳಕ್ಕೆ ಕಾಂತಾರ ಮೆರುಗು

ಕಂಬಳ ಸಮಾಲೋಚನ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ 
Last Updated 22 ನವೆಂಬರ್ 2022, 14:26 IST
ಅಕ್ಷರ ಗಾತ್ರ

ಮೂಡುಬಿದಿರೆ: ಒಂಟಿಕಟ್ಟೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ತಂಡವನ್ನು ಕರೆತರುವ ಮೂಲಕ ‘ಕಾಂತಾರ’ದ ಮೆರುಗು ನೀಡುವ ಪ್ರಯತ್ನ ನಡೆಯುತ್ತಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ಒಂಟಿಕಟ್ಟೆಯಲ್ಲಿ ಮಂಗಳವಾರ ಸಂಜೆ ನಡೆದ ಸಮಿತಿಯ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಕೌಟ್ಸ್ ಗೈಡ್ಸ್ ಅಂತರ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೂಡುಬಿದಿರೆಯಲ್ಲಿ ನಡೆಯಲಿರುವುದರಿಂದ ಕಂಬಳಕ್ಕೆ ವಿಶೇಷ ಮೆರುಗು ನಢಲಿದೆ.


ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕ ಸಿ.ಟಿ ರವಿ ಬರಲಿದ್ದಾರೆ. ಕೃಷಿ ಸಾಧಕರನ್ನು ಗೌರವಿಸಲು ನಿರ್ಧರಿಸಿದ್ದೇವೆ. ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕೋಣಗಳು, ಕಂಬಳಾಭಿಮಾನಿಗಳು ಪಾಲ್ಗೊಳ್ಳಲಿದ್ದು, ಸ್ವಯಂ ಸೇವಕರು, ಕಂಬಳ ಪ್ರೇಮಿಗಳು ವಿಶೇಷ ಮುತುವರ್ಜಿ ವಹಿಸಿ ಶ್ರಮಿಸುವಂತೆ ಅವರು ತಿಳಿಸಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಮಾತನಾಡಿ, ಮೂಡುಬಿದಿರೆ ಕಂಬಳ ಸಮಿತಿ ಹತ್ತು ಎಕರೆ ಜಾಗವಿತ್ತು. ಆದರೆ ಈಗ 8.5 ಎಕರೆ ಜಾಗ ಮಾತ್ರ ಉಳಿದುಕೊಂಡಿದೆ. ಉಳಿದ 1.5 ಎಕರೆ ಜಾಗವನ್ನು ಸಮಿತಿಗೆ ಸೇರಿಸಬೇಕು’ ಎಂದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ ಮಾತನಾಡಿ, ಶೂನ್ಯ ತ್ಯಾಜ್ಯ ಕಂಬಳ ನಡೆಸುವ ನಿಟ್ಟಿನಲ್ಲಿ ಕಂಬಳಾಭಿಮಾನಿಗಳ ಸಹಕಾರ ಅಗತ್ಯ ಎಂದರು.

ಕಂಬಳದ ಹಿರಿಯ ಯಜಮಾನ ಭಾಸ್ಕರ್ ಕೋಟ್ಯಾನ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಮುಖ್ಯಾಧಿಕಾರಿ ಇಂದು ಎಂ., ಸಮಿತಿಯ ಪ್ರಮುಖರಾದ ಸುನೀಲ್ ಆಳ್ವ, ಈಶ್ವರ್ ಕಟೀಲ್, ಕೆ.ಆರ್ ಪಂಡಿತ್, ಮೇಘನಾದ ಶೆಟ್ಟಿ, ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಕೆ.ಪಿ ಸುಚರಿತ ಶೆಟ್ಟಿ, ಧನಕೀರ್ತಿ ಬಲಿಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT