ಬುಧವಾರ, ಸೆಪ್ಟೆಂಬರ್ 30, 2020
20 °C
ಕನ್ಯಾಡಿ ರಾಮ ಕ್ಷೇತ್ರದಲ್ಲಿ ಶ್ರೀರಾಮ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮೂರ್ತಿ ಪ್ರತಿಷ್ಠಾಪನೆ

ಉಜಿರೆ | ಪ್ರೀತಿ-ವಿಶ್ವಾಸದಿಂದ ಆರೋಗ್ಯ,ನೆಮ್ಮದಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಪರಿಶುದ್ಧ ಮನಸ್ಸಿನಿಂದ ದೇವರ ಭಕ್ತಿ, ಧ್ಯಾನ ಮಾಡಿ, ಧರ್ಮದ ಅನುಷ್ಠಾನದೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದಿಂದ  ಜೀವನ ನಡೆಸಿದಾಗ ಎಲ್ಲರಿಗೂ ಆರೋಗ್ಯ ಹಾಗೂ ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದ ಕನ್ಯಾಡಿಯಲ್ಲಿರುವ ರಾಮಕ್ಷೇತ್ರದ ಗುರುದೇವ ಮಠದಲ್ಲಿ ಬುಧವಾರ ಅವರು ರಾಮ ಮತ್ತು ಪರಿವಾರ ಮೂರ್ತಿಗಳು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿ ಆಶೀರ್ವಚನ ನೀಡಿದರು.

‘ಶ್ರೀರಾಮನ ಮನಸ್ಸಿನಂತೆ ಎಲ್ಲರ ಮನದಲ್ಲಿಯೂ ಪಾವಿತ್ರ್ಯ ಇರುತ್ತದೆ. ನಾವು ಅದರ ಸದುಪಯೋಗ ಮಾಡಿ ಪ್ರೀತಿ-ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು’ ಎಂದು ಅವರು ಸಲಹೆ ನೀಡಿದರು.

ಮಂಗಳೂರಿನ ಚಿತ್ತರಂಜನ್ ಗರೋಡಿ, ಶೈಲೇಶ್ ಕುಮಾರ್, ಭಾಸ್ಕರ ಧರ್ಮಸ್ಥಳ ಹಾಗೂ ಉಜಿರೆಯ ಡಾ. ಎಂ. ಎಂ. ದಯಾಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು